ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಚಿತ್ತಾಪುರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್ ಖರ್ಗೆ (Priyank K harge) ಅವರಿಗೆ ಚುನಾವಣಾ ಆಯೋಗ (Election Commission) ಶೋಕಾಸ್ ನೋಟಿಸ್ ಜಾರಿ ಮಾಡಿದೆ.
ಪಿಯೂಷ್ ಗೋಯಲ್ (Piyush Goyal) ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರಿಯಾಂಕ್ ಖರ್ಗೆ ಅವರಿಗೆ ನೋಟಿಸ್ ಜಾರಿಯಾಗಿದೆ. ಕಾಂಗ್ರೆಸ್ ನಾಯಕರು ದೂರು ನೀಡಿದ ಹಿನ್ನೆಲೆಯಲ್ಲಿ ಕೊಪ್ಪಳ (Koppala) ಜಿಲ್ಲೆಯ ಯಲಬುರ್ಗ ದಲ್ಲಿ ಮಾಡಿದ ಭಾಷಣದ ವೇಳೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೂ ನೋಟಿಸ್ ಜಾರಿ ಮಾಡಲಾಗಿದೆ.
ಕೊಪ್ಪಳ ಜಿಲ್ಲಾ ಚುನಾವಣಾಧಿಕಾರಿಗಳು ಯತ್ನಾಳ್ ಅವರಿಗೆ ಶೋಕಾಸ್ ನೋಟಿಸ್ ನೀಡಿದ್ದು, ಮೇ 4 ರೊಳಗೆ ಸ್ಪಷ್ಟನೆ ನೀಡಲು ಸೂಚನೆ ನೀಡಿದ್ದಾರೆ.
ಪ್ರಿಯಾಂಕ್ ಖರ್ಗೆ ಅವರು ಪ್ರಧಾನಿ ಮೋದಿ ಅವರನ್ನು ‘ನಾಲಾಯಕ್’ ಎಂದು ಕರೆದಿದ್ದರು. ಯತ್ನಾಳ್ ಅವರು ಮೋದಿ ವಿಶ್ವ ನಾಯಕ. ಅಂಥ ನಾಯಕನನ್ನು ನಾಗರಹಾವಿಗೆ ಹೋಲಿಸುವುದು ಸರಿಯೇ? ಕಾಂಗ್ರೆಸ್ ನಾಯಕರು ಸೋನಿಯಾ ಮಾತಿಗೆ ಮಣಿದು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸೋನಿಯಾ ಗಾಂಧಿ ವಿಷಕನ್ಯೆಯೇ ಎಂದು ಪ್ರಶ್ನಿಸಿದ್ದರು. ರಾಹುಲ್ ಗಾಂಧಿ ಅವರನ್ನು ʼಅರೆಹುಚ್ಚʼ ಎಂದು ಕರೆದಿದ್ದರು