ಬಳ್ಳಾರಿ: ಬಳ್ಳಾರಿ ಜಿಲ್ಲೆಯಲ್ಲಿ ಬುಧವಾರ ನಾಮಪತ್ರ ಸಲ್ಲಿಕೆಯ ಭರಾಟೆ ಜೋರಾಗಿದ್ದು ಘಟಾನುಘಟಿ ನಾಯಕರು ಆಯಾ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಕಂಪ್ಲಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿರುವ ರಾಜು ನಾಯಕ್ ಅವರು ಚುನಾವಣಾ ಅಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಈ ಮೊದಲು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ರೋಡ್ ಶೋ ಮೂಲಕ ಬಾರೀ ಜನ ಬೆಂಬಲದೊಂದಿಗೆ ತಾಲೂಕು ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದ್ದಾರೆ.ಈ ವೇಳೆ ವಿಧಾನ ಪರಿಷತ್ ಶಾಸಕರಾದ ಟಿ.ಎ.ಶರವಣ ಅವರು ಭಾಗಿಯಾಗಿದ್ರು.
ಶ್ರೀ ರಾಜು ನಾಯಕ್ ಅವರಿಗೆ ಬೆಂಬಲವಾಗಿ ವಿಧಾನ ಪರಿಷತ್ ಶಾಸಕರಾದ ಟಿ.ಎ.ಶರವಣ ಉಪಸ್ಥಿತರಿದ್ದು ಅವರ ನೇತೃತ್ವದಲ್ಲೇ ನಾಮಪತ್ರ ಸಲ್ಲಿಸಿದರು. ಈ ವೇಳೆ ಸಾವಿರಾರು ಕಾರ್ಯಕರ್ತರು ಕೂಡ ಉತ್ಸಾದಿಂದ ಭಾಗಿಯಾಗಿ ಜೆಡಿಎಸ್ ಅಭ್ಯರ್ಥಿ ರಾಜು ನಾಯಕ್ ಗೆ ಬೆಂಬಲ ಸೂಚಿಸಿದರು.