ಬೆಂಗಳೂರು: 14ನೇ ಬಾರಿಗೆ ಬಜೆಟ್ ಮಂಡಿಸುತ್ತಿರುವ ಸಿದ್ದರಾಮಯ್ಯನವರು ‘ತೆಂಗು, ಅಡಕೆ, ದ್ರಾಕ್ಷಿ, ದಾಳಿಂಬೆ ಬೆಳೆ ಸಂಸ್ಕರಣೆಗೆ 10 ಕೋಟಿ ವೆಚ್ಚದಲ್ಲಿ ಯೋಜನೆ ಜಾರಿ, ಚಿಕ್ಕಮಗಳೂರು ಕಾಫಿ, ಪ್ರವಾಸೋದ್ಯಮ ಉತ್ತೇಜನಕ್ಕೆ ಕ್ರಮ ಕೈಗೊಳ್ಳಲಾಗುವುದು.
ಜೊತೆಗೆ ಶಿಡ್ಲಘಟ್ಟದಲ್ಲಿ 75 ಕೋಟಿ ವೆಚ್ಚದಲ್ಲಿ ರೇಷ್ಮೆ ಮಾರುಕಟ್ಟೆ ಸ್ಥಾಪನೆ. ಅನುಗ್ರಹ ಯೋಜನೆ ಮರು ಜಾರಿ ಮಾಡಿ ‘ಕುರಿ ಮೇಕೆ ಮೃತಪಟ್ಟರೆ 5 ಸಾವಿರ ರೂ. ಪರಿಹಾರ ನೀಡಲಾಗುವುದು.
ವಾಣಿಜ್ಯ ತೆರಿಗೆ ಇಲಾಖೆಯಿಂದ 1,01,000 ಲಕ್ಷ ಕೋಟಿ, ಅಬಕಾರಿ ಇಲಾಖೆಯಿಂದ 36,000 ಕೋಟಿ, ನೋಂದಣಿ & ಮುದ್ರಾಂಕ ಇಲಾಖೆಯಿಂದ 25,000 ಕೋಟಿ ಸೇರಿ ಒಟ್ಟು 1,62,000 ಕೋಟಿ ರಾಜಸ್ವ ಸಂಗ್ರಹ ಗುರಿಯನ್ನ ಸರ್ಕಾರ ಹೊಂದಿದೆ.