ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸದ್ಯ ಕಾಂಗ್ರೆಸ್ ಗ್ಯಾರಂಟಿಗಳದ್ದೇ ಚರ್ಚೆ ನಡೆಯುತ್ತಿದೆ. ಗ್ಯಾರಂಟಿ ಯೋಜನೆಗಳಿಗೆ ರಾಜ್ಯ ಸರ್ಕಾರದಿಂದ ಷರತ್ತು ವಿಚಾರವಾಗಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ಒಂದು ಗ್ಯಾರಂಟಿಯಲ್ಲಿ ಅಲ್ಲ, 5 ಗ್ಯಾರಂಟಿಗಳಲ್ಲೂ ಗೊಂದಲಗಳಿವೆ.
ಗ್ಯಾರಂಟಿ ಘೋಷಣೆ ಮಾಡುವಾಗ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ಗೆ ಪರಿಜ್ಞಾನ ಇರಲಿಲ್ಲವಾ? ಎಂದು ಪ್ರಶ್ನಿಸಿದ್ದಾರೆ. ಇಂಧನ ಇಲಾಖೆ ಸಚಿವರು ಜಾರ್ಜ್ ಅವರಿಗೆ ಅರ್ಥ ಆಗಿಲ್ಲ ಅನ್ನಿಸುತ್ತಿದೆ. ಸಂಪೂರ್ಣ ಮಾಹಿತಿ ಅವರಿಗೆ ಇಲ್ಲ.
ಹೆಬ್ಬಾಳ್ಕರ್ ಅವರಿಗೂ ಮಾಹಿತಿ ಇಲ್ಲ ಅನ್ನಿಸುತ್ತಿದೆ. ಚುನಾವಣೆ ಪೂರ್ವದಲ್ಲಿ ಏನು ಘೋಷಣೆ ಮಾಡಿದ್ದರು? ಈಗ ಸಬೂಬು ಏನು ಕೊಡುತ್ತಾ ಇದ್ದಾರೆ? ಎಂದು ಪ್ರಶ್ನಿಸಿದರು. ಅಲ್ಲದೆ, 15 ಲಕ್ಷ ಬಿಜೆಪಿ ಯವರು ಕೊಟ್ಟಿದ್ದಾರಾ ಅಂತ ಕೇಳುತ್ತಿದ್ದಾರೆ. ಅವರು ಕೊಟ್ಟಿಲ್ಲ ಅಂತ ನಾನು ಕೊಡಲ್ಲ ಅನ್ನೋದು ಎಷ್ಟು ಸರಿ ಎಂದು ಆಕ್ರೋಶ ಹೊರಹಾಕಿದ್ದಾರೆ.