ಹುಬ್ಬಳ್ಳಿ ;- ಹಿಟ್ಲರ್ ರೀತಿಯಲ್ಲಿ ಆಡಳಿತ ಮಾಡಲು ಸಿಎಂ ಸಿದ್ದರಾಮಯ್ಯ ಅವರು ತೀರ್ಮಾನ ಮಾಡಿದ್ದಾರೆ ಎಂದು ಸಚಿವ ಪ್ರಹ್ಲಾದ್ ಜೋಶಿ ಗಂಭೀರ ಆರೋಪ ಮಾಡಿದರು.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಟ್ಲರ್ ರೀತಿಯಲ್ಲಿ ಆಡಳಿತ ಮಾಡಲು ತೀರ್ಮಾನ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಭಾರತ ದ್ವೇಷಿ ರಾಹುಲ್ ಗಾಂಧಿ ತರಹ ಮಾತನಾಡುತ್ತಿದ್ದಾರೆ ಎಂದ ಅವರು, ಆಸ್ತಿಕರ ಏರಿಕೆ ಮಾಡಿದ್ದಾರೆ. ಅಬಕಾರಿ ಟಾರ್ಗೆಟ್ ಕೊಟ್ಟಿದ್ದಾರೆ. ಇನ್ನು ಸರ್ಕಾರಿ ನೌಕರರಿಗೆ ಕಾಂಗ್ರೆಸ್ ಸರ್ಕಾರ ಇದ್ದಾಗಲೇ ಎನ್ಇಪಿಗೆ ಮೊದಲು ಒಪ್ಪಿಗೆ ನೀಡಿತ್ತು. ಆದರೆ ಇವತ್ತು ಕೈ ಬಿಟ್ಟಿದ್ದಾರೆ.
ಆದ್ದರಿಂದ ಸಂಪೂರ್ಣ ತುಷ್ಟೀಕರಣ ಬಜೆಟ್ ಮಂಡನೆ ಮಾಡಿದ್ದಾರೆ, ಅಭಿವೃದ್ಧಿ ಪೂರ್ವಕವಲ್ಲ ಎಂದರು. ಮೂಲಭೂತ ಸೌಕರ್ಯಗಳು ನೆಲಕಚ್ಚುವ ಬಜೆಟ್ ಆಗಿದ್ದು, ಶಾಸಕರಿಗೆ ಅನುದಾನ ಕೇಳಬೇಡಿ ಎಂದು ನೇರವಾಗಿ ಹೇಳುತ್ತಿದ್ದಾರೆ. ಇದು ಕಾಂಗ್ರೆಸ್ ಯಾವಸ್ಥಿತಿಗೆ ಬಂದಿದೆ ಎಂಬುದಕ್ಕೆ ಸಾಕ್ಷಿಯಾಗಿದೆ.
ಯುವಶಕ್ತಿಗೆ ನಯಾಪೈಸೆ ಹಣ ಇಟ್ಟಿಲ್ಲ, ಗೃಹಲಕ್ಷ್ಮಿಗೆ ಈಗ ಹಣ ಇಟ್ಟಿದ್ದಾರೆ. ಇನ್ನು ರೈಲ್ವೆ ಯೋಜನೆಗೆ ರಾಜ್ಯದ ಪಾಲಿನ ಅನುದಾನ ಮೀಸಲಿಟ್ಟಿಲ್ಲ. ಇದರ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ ಎಂದು ಹೇಳಿದ್ದಾರೆ.