ಬೆಂಗಳೂರು:- ಸಿಎಂ ಸ್ಥಾನ ಉಳಿಸಿಕೊಳ್ಳುವಲ್ಲೇ ಸಿದ್ದರಾಮಯ್ಯ ಮಗ್ನರಾಗಿದ್ದೇವೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ರೈತರಿಗೆ ಬರ ಪರಿಹಾರ ನೀಡಿಲ್ಲ. ಅಭಿವೃದ್ಧಿಗೆ ನಯಾ ಪೈಸೆ ಹಣ ಬಿಡುಗಡೆ ಆಗಿಲ್ಲ. ಬಂಡವಾಳ ಹೂಡಿಕೆಗೆ ಯಾರೂ ಬರುತ್ತಿಲ್ಲ. ಮುಖ್ಯಮಂತ್ರಿಗಳು ತಮ್ಮ ಸ್ಥಾನ ಉಳಿಸಿಕೊಳ್ಳುವ ರಾಜಕಾರಣದಲ್ಲಿ ಮಗ್ನರಾಗಿದ್ದಾರೆ ಎಂದರು.
ಈ ಸರ್ಕಾರ ಬಂದ ಕೂಡಲೇ ಬಂಡವಾಳ ಹೂಡಿಕೆದಾರರು ಹೊರಗೆ ಹೋಗುವಂತ ವಾತಾವರಣ ಸೃಷ್ಟಿ ಮಾಡಿದ್ದಾರೆ. ನಮ್ಮ ಕಾಲದಲ್ಲಿ ಹೂಡಿಕೆ ಮಾಡಲು ಬಂದವರು ವಾಪಸ್ ಹೋಗುತ್ತಿದ್ದಾರೆ. ಬಂಡವಾಳ ಹೂಡಿಕೆ ಆಕರ್ಷಣೆ ಆಗುತ್ತಿಲ್ಲ. FDI ನಲ್ಲಿ ಶೇ. 30% ಕಡಿತ ಆಗಿದೆ. ಸಿಎಂ ಈಗಲಾದರೂ ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದರು. ಅಲ್ಲದೇ ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ರಚಿಸಿರುವ ಸಮಿತಿಗೆ ಕ್ಯಾಬಿನೆಟ್ ದರ್ಜೆ ನೀಡುವ ವಿಚಾರಕ್ಕೆ ಪ್ರತಿಕ್ರಿಯಸಿದ ಅವರು, ಸಿಎಂ ಸಲಹೆಗಾರರನ್ನು ತೆಗೆದುಕೊಳ್ಳಬೇಕು ನಿಜ. ಅದು ಸದಸ್ಯರ ಶೇ 15% ಮೀರದಂತೆ ಕ್ಯಾಬಿನೆಟ್ ದರ್ಜೆ ಕೊಡಬೇಕು. ಅದಕ್ಕಿಂತ ಹೆಚ್ಚು ಕ್ಯಾಬಿನೆಟ್ ದರ್ಜೆ ಕೊಡುವಂತಿಲ್ಲ. ಹಿಂದೆ ಸಿಎಂ ಆಗಿದ್ದಾಗ ಆ ರೀತಿ ಮಾಡಬಾರದು ಎಂದು ಆದೇಶ ಇದೆ. ಇದು ಸಂವಿಧಾನ ವಿರುದ್ಧ ಮಾಡಿ ಕಾನೂನು ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ಹೇಳಿದರು.