ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿರುವ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ದೇಶದ ಪ್ರಧಾನಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 2014 ಮತ್ತು 2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿಯಾಗಿದ್ದ ರಾಹುಲ್ ಗಾಂಧಿ 2024 ರಲ್ಲಿ ಪ್ರಧಾನಿಯಾಗುತ್ತಾರೆ ಎಂದು ಕಾಂಗ್ರೆಸ್ ನಾಯಕ ಆಶಿಸಿದರು.
ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶವನ್ನು ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಜನಾದೇಶ ಎಂದು ಬಣ್ಣಿಸಿದ ಸಿದ್ದರಾಮಯ್ಯ, ಇದು ಮುಂದಿನ ವ ರ್ಷ ನಡೆಯಲಿರುವ ಲೋಕಸಭಾ ಚುನಾವಣೆಗೆ ‘ಮೆಟ್ಟಿಲು’ ಎಂದು ಹೇಳಿದರು.