ಬೆಂಗಳೂರು : ಇಂದು ಕರ್ನಾಟಕದ 31ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Chief Minister Siddaramaiah) ಅವರು 2 ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಇಂದು ಮಧ್ಯಾಹ್ನ 12.30 ಕ್ಕೆ ರಾಜ್ಯಪಾಲ ಥಾವತ್ ಚಂದ್ ಗೆಹಲೋತ್ ಅವರು ಸಿದ್ದರಾಮಯ್ಯ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞೆ ಬೋಧಿಸಿದ್ದಾರೆ.
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಿದ್ದು, ಪ್ರಮಾಣ ವಚನ ಸಮಾರಂಭಕ್ಕೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ದೇಶದ ಹಲವು ರಾಜ್ಯಗಳು ಮುಖ್ಯಮಂತ್ರಿಗಳು, ಹಲವು ಗಣ್ಯರು ಭಾಗಿಯಾಗಿದ್ದಾರೆ.