ಬೆಂಗಳೂರು: ನನ್ನ ಮತ್ತು ಡಿ.ಕೆ.ಶಿವಕುಮಾರ್ ನಡುವೆ ವೈಮನಸ್ಸಿದೆ ಎನ್ನುವುದು ವಿರೋಧಿಗಳ ಆರೋಪವಷ್ಟೇ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ನನ್ನ ಮತ್ತು ಡಿ.ಕೆ.ಶಿವಕುಮಾರ್ ನಡುವೆ ವೈಮನಸ್ಸಿದೆ ಎನ್ನುವುದು ವಿರೋಧಿಗಳ ಆರೋಪವಷ್ಟೇ.
ಜನತೆ ಅದಕ್ಕೆ ಸೊಪ್ಪು ಹಾಕಬಾರದು. ಕಾಂಗ್ರೆಸ್ ಒಗ್ಗಟ್ಟಿನಿಂದ ಕೂಡಿದ್ದು, ಈ ಸಲ ಅಧಿಕಾರಕ್ಕೆ ಬರುವುದು ಖಚಿತ ಎಂದರು. ಇದು ನನ್ನ ಕೊನೆಯ ಚುನಾವಣೆಯಾಗಿದೆ. ಅಲ್ಲದೇ ನಾನು ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುತ್ತೇನೆ ಹೊರತು ರಾಜಕೀಯದಿಂದ ಅಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು. ಮೀಸಲಾತಿ ಮರುವಿಂಗಡಣೆ ಸಾಂವಿಧಾನಿಕವಲ್ಲ.
ಒಕ್ಕಲಿಗ ಮತ್ತು ಲಿಂಗಾಯತ ಮೀಸಲಾತಿಯನ್ನು ಹೆಚ್ಚಿಸಲು ನಮ್ಮ ವಿರೋಧವಿಲ್ಲ. ಆದರೆ, ಮುಸ್ಲಿಮರ ಮೀಸಲಾತಿಯನ್ನು ಏಕೆ ರದ್ದುಗೊಳಿಸಿದ್ದು, ಎಂದು ಪ್ರಶ್ನಿಸಿದ ಅವರು, ಇದು ದ್ವೇಷದ ರಾಜಕಾರಣವನ್ನು ಸ್ಪಷ್ಟವಾಗಿ ತೋರಿಸುತ್ತದೆ ಎಂದು ಬಿಜೆಪಿ ವಿರುದ್ಧ ಅವರು ಹರಿಹಾಯ್ದರು.