ನವದೆಹಲಿ: ಅಹಿಂದ್ ಹೆಸರಲ್ಲಿ ಸಿದ್ದರಾಮಯ್ಯ ಮತ ಪಡೆದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನದೆಹಲಿಯಲ್ಲಿ ಹೇಳಿದರು. ದಲಿತರ ಅಭಿವೃದ್ಧಿಗೆ ಮೀಸಲಿಟ್ಟಿರುವ ಹಣ ಬೇರೆ ಕಡೆ ಬಳಕೆ ಮಾಡಿದ್ದಾರೆ. ಎಸ್ಸಿ, ಎಸ್ಟಿಗೆ ಮೀಸಲಿಟ್ಟ ಹಣ ವಾಪಸ್ ಪಡೆದಿದ್ದಾರೆ. ದಲಿತರ ಕಲ್ಯಾಣಕ್ಕೆ ಹಣದ ಕೊರತೆ ಆಗಲಿದೆ. ಇದು ದಲಿತ ವಿರೋಧಿ ಸರ್ಕಾರ ಎಂದು ವಾಗ್ದಾಳಿ ನಡೆಸಿದ್ದಾರೆ.