ಯಾದಗಿರಿ: ಸದ್ಯಕ್ಕೆ ಸಿಎಂ ಕುರ್ಚಿ ಖಾಲಿ ಇಲ್ಲ. ಸಿದ್ದರಾಮಯ್ಯ ಮುಂದಿನ ಐದು ವರ್ಷ ಅಲ್ಲ, ಹತ್ತು ವರ್ಷ ಸಿಎಂ ಆಗಿ ಅಧಿಕಾರದಲ್ಲಿರ್ತಾರೆ ಎಂದು ಸಚಿವ ಶರಣಬಸಪ್ಪ ದರ್ಶನಾಪುರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಸಿಎಂ ಕುರ್ಚಿ ಖಾಲಿ ಇಲ್ಲ.
ಸಿದ್ದರಾಮಯ್ಯ ಮುಂದಿನ ಐದು ವರ್ಷ ಅಲ್ಲ, ಹತ್ತು ವರ್ಷ ಸಿಎಂ ಆಗಿ ಅಧಿಕಾರದಲ್ಲಿರ್ತಾರೆ. ರಾಜ್ಯದಲ್ಲಿ ಸಿದ್ದರಾಮಯ್ಯನವರಿಗೆ ಹೆಚ್ಚಿನ ಜನ ಬೆಂಬಲವಿದೆಜನ ಬೆಂಬಲವಿರೋದಕ್ಕೆ ಬಿಜೆಪಿ ಸಿದ್ದರಾಮಯ್ಯರನ್ನು ಟಾರ್ಗೆಟ್ ಮಾಡುತ್ತಿದೆ. ಕಾಂಗ್ರೆಸ್ ಶಾಸಕರನ್ನು ಬಿಜೆಪಿ ಸೆಳೆಯುವ ಯತ್ನ ಮಾಡಿದ್ರೂ ಯಾರೂ ಬಿಜೆಪಿಗೆ ಹೋಗುತ್ತಿಲ್ಲ. ಈ ಹಿಂದೆ ಕಾಂಗ್ರೆಸ್ ಶಾಸಕರನ್ನು ಆಪರೇಷನ್ ಕಮಲದ ಮೂಲಕ 17 ಶಾಸಕರನ್ನು ಖರೀದಿ ಮಾಡಿ ಬಿಜೆಪಿ ಸರಕಾರ ರಚನೆ ಮಾಡಿತ್ತು ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.