ಬೆಂಗಳೂರು: ಮುಸ್ಲಿಂ ಸಮುದಾಯ ಸಿದ್ದರಾಮಯ್ಯ ಸಿಎಂ ಆಗಲು ಬಯಸುತ್ತೆ ಎಂದು ಶಾಸಕ ಜಮೀರ್ ಅಹಮದ್ ಖಾನ್(Zameer Khan) ಹೇಳಿದ್ದಾರೆ. ಈ ಸಂಬಂಧ ಮಾದನಾಯಕನಹಳ್ಳಿಯಲ್ಲಿ(Madanayakanahalli) ಮಾತನಾಡಿದ ಅವರು, ರಾಜ್ಯದಲ್ಲಿ ಎಲ್ಲಿ ಪ್ರವಾಸ ಮಾಡಿದರೂ ಎಲ್ಲಾ ಸಮುದಾಯದರು ಸಿದ್ದರಾಮಯ್ಯ ಸಿಎಂ ಆಗಲು ಬಯಸುತ್ತಿದ್ದಾರೆ. ಹಾಗೆಯೇ ಮುಸ್ಲಿಂ ಸಮುದಾಯವರು ಸಹ ಸಿದ್ದರಾಮಯ್ಯ ಸಿಎಂ ಆಗಲು ಬಯಸುತ್ತಿದ್ದಾರೆ. ಆದರೆ, ಹೈಕಮಾಂಡ್ ತಿರ್ಮಾನವೇ ಅಂತಿಮ ಎಂದರು. ನಾನು ಸಹ ಮೊದಲಿನಿಂದಲೂ ಸಿದ್ದರಾಮಯ್ಯ (Siddaramaiah)ಸಿಎಂ ಆಗಬೇಕೆಂದು ಹೇಳುತ್ತಿದ್ದು ಈಗಲು ಸಹ ಈ ಮಾತಿಗೆ ಬದ್ದನಾಗಿದ್ದಾನೆ.
ಇದು ನನ್ನ ವೈಯಕ್ತಿಕ ಹೇಳಿಕೆ ಎಂದರು. ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಒಳಒಪ್ಪಂದ ಮಾಡಿಕೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, 2018ರ ಚುನಾವಣೆಯಲ್ಲೂ ಡಾ.ಯತಿಂದ್ರ ಅವರನ್ನು ಸೋಲಿಸಲು ಜೆಡಿಎಸ್ ಮತ್ತು ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿತ್ತು. ಆದರೆ, ಯತಿಂದ್ರ 50 ಸಾವಿರ ಮತಗಳ ಅಂತರದಲ್ಲಿ ಗೆದ್ದರು, ಈ ಬಾರಿಯ ಚುನಾವಣೆಯಲ್ಲಿ ಸಿದ್ದರಾಮಯ್ಯ ದಾಖಲೆಯ ಅಂತರದಲ್ಲಿ ಜಯ ಸಾಧಿಸುತ್ತಾರೆ, ಈ ಗೆಲುವು ಇತಿಹಾಸವಾಗಲಿದೆ ಎಂದು ಹೇಳಿದರು.