ಮೈಸೂರು:- ಮೈಸೂರು ರಸ್ತೆಗೆ ಸಿದ್ದರಾಮಯ್ಯ ಹೆಸರು ಪ್ರಸ್ತಾಪ ಮಾಡಿರುವುದಕ್ಕೆ ಸ್ನೇಹಮಯಿ ಕೃಷ್ಣ ವಿರೋಧ ವ್ಯಕ್ತಪಡಿಸಿದ್ದಾರೆ.
ಮೈಸೂರು ನಗರ ಪಾಲಿಕೆ ವತಿಯಿಂದ ಪ್ರಿನ್ಸೆಸ್ ರೋಡ್ ನಾಮಫಲಕ ಅಳವಡಿಸಿ ಗೊಂದಲವನ್ನು ನಿವಾರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ಮಾರ್ಗ ಎಂಬ ಹೆಸರನ್ನು ನಾಮಕರಣ ಮಾಡುವ ಪ್ರಸ್ತಾವನೆ ಕೂಡಲೇ ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿರುವ ಅವರು, ಹಲವು ದಾಖಲೆಗಳನ್ನೂ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪ್ರಿನ್ಸೆಸ್ ರಸ್ತೆ ಹೆಸರಿನ ದಾಖಲೆಗಳನ್ನೂ ನೀಡಿದ್ದಾರೆ. ಜತೆಗೆ ರೈಲ್ವೆ ಇಲಾಖೆಯಲ್ಲಿ ಉಲ್ಲೇಖವಿರುವ ಬಗ್ಗೆಯೂ ದಾಖಲೆ ನೀಡಿದ್ದಾರೆ.
ಮಾಜಿ ಸಂಸದ ಪ್ರತಾಪಸಿಂಹ ಸಭೆ ನಡಾವಳಿಯಲ್ಲೂ ‘ಪ್ರಿನ್ಸೆಸ್ ರಸ್ತೆ’ ಎಂದು ನಮೂದಾಗಿರುವ ದಾಖಲೆ ನೀಡಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಹೆಸರು ರಸ್ತೆಗೆ ಇರುವ ಪ್ರಸ್ತಾವಕ್ಕೆ ಬೆಂಬಲ ನೀಡದಂತೆ ಪ್ರತಾಪಸಿಂಹ ಅವರಿಗೂ ಮನವಿ ಮಾಡಿದ್ದಾರೆ.