ಮೈಸೂರು:- ಸಿದ್ದರಾಮಯ್ಯ ಪತ್ನಿ ವಿರುದ್ಧ ಮತ್ತೊಂದು ಭೂ ಅಕ್ರಮ ಆರೋಪ ಕೇಳಿ ಬಂದಿದ್ದು, ರಾಜ್ಯಪಾಲರಿಗೆ ದೂರು ನೀಡಲು ಆರ್ಟಿಐ ಕಾರ್ಯಕರ್ತ ಸಿದ್ಧತೆ ಮಾಡಿಕೊಂಡಿದ್ದಾರೆ.
ಭೂ ಅಕ್ರಮ ಆರೋಪ ಸಂಬಂಧ ಇಂದು ರಾಜ್ಯಪಾಲರಿಗೆ ದೂರು ನೀಡಲು ಅವರು ನಿರ್ಧರಿಸಿದ್ದರು.
ಅದರಂತೆ, ಇಂದು ಕಾನೂನು ತಜ್ಞರ ಜೊತೆ ಚರ್ಚಿಸಿ ಅರ್ಜಿ ಸಿದ್ಧಪಡಿಸಿಕೊಳ್ಳಲಿದ್ದಾರೆ.
ಮುಡಾಗೆ ನೀಡಲಾಗಿದ್ದ ಜಾಗವನ್ನು ಮತ್ತೆ ತಮ್ಮ ಹೆಸರಿಗೆ ಕ್ರಯ ಮಾಡಿಸಿಕೊಂಡಿದ್ದ ಆರೋಪ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮೇಲಿದೆ.