ತಿಪಟೂರು ತಾಲೂಕಿನ ಹೆಡಗರಹಳ್ಳಿ ಗ್ರಾಮದಲ್ಲಿ ತಾಯಿಯೊಬ್ಬಳು ರಸ್ತೆ ಬದಿಯಲ್ಲಿ ಮೂರು ತಿಂಗಳ ಮಗುವನ್ನು ಅನಾಥವಾಗಿ ಬಿಟ್ಟು ಹೋಗಿರುವ ಘಟನೆ ಜರುಗಿದೆ.
ರಾತ್ರಿ ಊಟ ಮಾಡಿ ವಾಕಿಂಗ್ ಮಾಡುತ್ತಿದ್ದ ಆಶಾ ಕಾರ್ಯಕರ್ತೆ ಕಲಾವತಿ ಅವರಿಗೆ ರಸ್ತೆ ಬದಿಯಲ್ಲಿ ಅಳುತ್ತಿದ್ದ ಮಗುವಿನ ಶಬ್ದ ಕೇಳಿಸಿತ್ತು. ಸ್ಥಳಕ್ಕೆ ಹೋದಾಗ, ಮೂರು ತಿಂಗಳ ಮಗುವನ್ನು ಬಿಟ್ಟು ಹೋಗಿರುವುದು ಬೆಳಕಿಗೆ ಬಂದಿದೆ.
ಕೂಡಲೇ ನೊಣವಿನಕೆರೆ ಪೊಲೀಸರಿಗೆ ಆಶಾ ಕಾರ್ಯಕರ್ತೆ ಕಲಾವತಿ ಮಾಹಿತಿ ನೀಡಿದ್ದಾರೆ. ಆಂಬ್ಯುಲೆನ್ಸ್ ಮೂಲಕ ತಿಪಟೂರು ಸಾರ್ವಜನಿಕ ಆಸ್ಪತ್ರೆಗೆ ಮಗು ಕರೆದೊಯ್ಯಲಾಗಿದೆ. ವೈದ್ಯರು ಮಗುವಿನ ಆರೋಗ್ಯ ತಪಾಸಣೆ ನಡೆಸಿದ್ದು, ಆರೋಗ್ಯವಾಗಿರುವ ಮಗು 4.5 ಕೆಜಿಯಷ್ಟು ತೂಕವಿದೆ. ನೊಣವಿನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.