ಬೆಂಗಳೂರು: ಜಾತಿ ನಿಂದನೆ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ಎಸ್ಐಟಿ ದಾಳಿ ಮಾಡಿದೆ. ಬೆಂಗಳೂರಿನ ವೈಯಾಲಿಕಾವಲ್ ನಿವಾಸದ ಮೇಲೆ ಎಸ್ಐಟಿ ಎಸಿಪಿ ಕವಿತಾ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸಿದೆ.
ಸದ್ಯ ಮೂರು ಕೇಸ್ಗಳ ಸಂಬಂಧ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ವೈಯಾಲಿಕಾವಲ್ ನಿವಾಸ ಸೇರಿದಂತೆ ಒಟ್ಟು 15 ಕಡೆಗಳಲ್ಲಿ ಎಸ್ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದರು.ಅತ್ಯಾಚಾರ, ಜಾತಿ ನಿಂದನೆ ಹಾಗೂ ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ಶನಿವಾರ ಬೆಳಗ್ಗೆ ದಾಳಿ ನಡೆಸಿದರು ಎನ್ನಲಾಗಿದೆ.