ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ತಮಗೆ ಡಿಸಿಎಂ ಹುದ್ದೆ ಸಿಗುತ್ತದೆಯೇ ಎಂಬ ಪ್ರಶ್ನೆಗೆ ಮಾಜಿ ಸಚಿವ ಕೃಷ್ಣ ಬೈರೇಗೌಡ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸಿಎಂ ಹುದ್ದೆ ಸಾಂವಿಧಾನಿಕ ಹುದ್ದೆ ಅಲ್ಲ.
ಆದರೆ ಕೆಲವೊಮ್ಮೆ ನಾಯಕರ ಶ್ರಮವನ್ನು ಪರಿಗಣಿಸಿ ಡಿಸಿಎಂ ಹುದ್ದೆ ನೀಡಬೇಕಾಗುತ್ತದೆ. ಏನೇ ಆದ್ರೂ ಸಿಎಂ ಅಂದರೆ ಕ್ಯಾಪ್ಟನ್ ಇದ್ದ ಹಾಗೆ. ಆದರೂ ಕೆಲವೊಮ್ಮೆ ಅನಿವಾರ್ಯವಾಗಿ ಡಿಸಿಎಂ ಹುದ್ದೆಗಳನ್ನು ನೀಡಬೆಕಾಗುತ್ತದೆ. ಪಕ್ಷದ ಹಿರಿಯ ನಾಯಕರ ಮಟ್ಟದಲ್ಲಿ ಏನು ಚರ್ಚೆ ನಡೆಯುತ್ತಿದೆ ಎಂಬುದರ ಬಗ್ಗೆ ಗೊತ್ತಿಲ್ಲ ಎಂದು ಕೃಷ್ಣ ಬೈರೇಗೌಡರು ತಿಳಿಸಿದ್ದಾರೆ