ಹಿಂದಿ ಚಿತ್ರರಂಗಕ್ಕೆ ಹೊಸ ಹೊಸ ಸ್ಟಾರ್ ಗಳು ಎಂಟ್ರಿಕೊಡ್ತಿದ್ದಾರೆ. ಸದ್ಯ ಬಾಲಿವುಡ್ ನಲ್ಲಿ ಸೆಲೆಬ್ರಿಟಿಗಳ ಮಕ್ಕಳು ಮಿಂಚುತ್ತಿದ್ದು ಇದೀಗ ಆ ಸಾಲಿಗೆ ಆಮಿರ್ ಖಾನ್ ಪುತ್ರ ಜುನೈದ್ ಖಾನ್ ಹಾಗೂ ಶ್ರೀದೇವಿ ಪುತ್ರಿ ಖುಷಿ ಕಪೂರ್ ಎಂಟ್ರಿಕೊಡ್ತಿದ್ದಾರೆ.
ಜುನೈದ್ ಖಾನ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಮೊದಲ ಸಿನಿಮಾ ರಿಲೀಸ್ ಗೂ ಮುನ್ನವೇ ಮೂರನೇ ಸಿನಿಮಾ ಒಪ್ಪಿಕೊಂಡಿರುವ ಬಗ್ಗೆ ವರದಿ ಆಗಿದೆ. ಈ ಸಿನಿಮಾದಲ್ಲಿ ಜುನೈದ್ ಗೆ ಜೋಡಿಯಾಗಿ ಶ್ರೀದೇವಿಯ 2ನೇ ಮಗಳು ಖುಷಿ ಕಪೂರ್ ನಟಿಸುತ್ತಿದ್ದಾರೆ.
ಹಲವು ವರ್ಷಗಳ ಕಾಲ ರಂಗಭೂಮಿಯಲ್ಲಿ ಪಳಗಿರುವ ಜುನೈದ್ ಇದೀಗ ಬಾಲಿವುಡ್ಗೆ ಕಾಲಿಡುತ್ತಿದ್ದಾರೆ. ಅವರ ಮೊದಲ ಸಿನಿಮಾಗೆ ಯಶ್ ರಾಜ್ ಫಿಲ್ಮ್ಸ್ ಬಂಡವಾಳ ಹೂಡಿದೆ. 2ನೇ ಸಿನಿಮಾದಲ್ಲಿ ಜುನೈದ್ ಖಾನ್ ಅವರು ಸಾಯಿ ಪಲ್ಲವಿ ಜೊತೆ ನಟಿಸುತ್ತಿದ್ದಾರೆ. ಆ ಸಿನಿಮಾದ ಟೈಟಲ್ ಇನ್ನೂ ಬಹಿರಂಗ ಆಗಿಲ್ಲ. ಅಷ್ಟರಲ್ಲಾಗಲೇ ಮೂರನೇ ಸಿನಿಮಾದ ಬಗ್ಗೆ ಮಾಹಿತಿ ಹೊರ ಬಿದ್ದಿದೆ.
ಮೂರನೇ ಸಿನಿಮಾದಲ್ಲಿ ಜುನೈದ್ ಖಾನ್ ಅವರು ರಿಮೇಕ್ ಪ್ರಯತ್ನ ಮಾಡಲಿದ್ದಾರೆ ಎನ್ನಲಾಗಿದೆ. ತಮಿಳಿನ ಸೂಪರ್ ಹಿಟ್ ಸಿನಿಮಾ ‘ಲವ್ ಟುಡೇ’ ಹಿಂದಿಗೆ ರಿಮೇಕ್ ಆಗಲಿದ್ದು, ಆ ಚಿತ್ರದಲ್ಲಿ ಜುನೈದ್ ಖಾನ್ ಮತ್ತು ಖುಷಿ ಕಪೂರ್ ಅವರು ಒಟ್ಟಿಗೆ ನಟಿಸುವ ಸಾಧ್ಯತೆ ದಟ್ಟವಾಗಿದೆ. ಅದ್ವೈತ್ ಚಂದನ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಲಿದ್ದಾರೆ. ಶೀಘ್ರದಲ್ಲೇ ಇದರ ಶೂಟಿಂಗ್ ಆರಂಭ ಆಗಲಿದೆ ಎಂದು ಹೇಳಲಾಗುತ್ತಿದೆ.
ಶ್ರೀದೇವಿ ಅವರ ಮೊದಲ ಮಗಳು ಜಾನ್ವಿ ಕಪೂರ್ ಈಗಾಗಲೇ ಸ್ಟಾರ್ ಆಗಿ ಮಿಂಚುತ್ತಿದ್ದಾರೆ. 2ನೇ ಮಗಳು ಖುಷಿ ಕಪೂರ್ ಅವರು ‘ದಿ ಆರ್ಚೀಸ್’ ಸಿನಿಮಾದಲ್ಲಿ ನಟಿಸುವ ಮೂಲಕ ಖಾತೆ ತೆರೆದಿದ್ದಾರೆ. ಆ ಸಿನಿಮಾ ನೇರವಾಗಿ ಒಟಿಟಿಯಲ್ಲಿ ಬಿಡುಗಡೆ ಆಯಿತು. ಅವರ ಮುಂದಿನ ಪ್ರಾಜೆಕ್ಟ್ಗಳ ಬಗ್ಗೆ ಗಾಸಿಪ್ ಕೇಳಿಬರುತ್ತಿದೆ. ಜುನೈದ್ ಖಾನ್ ಮತ್ತು ಖುಷಿ ಕಪೂರ್ ಜೋಡಿಯನ್ನು ತೆರೆ ಮೇಲೆ ಮಿಂಚಲು ಸಜ್ಜಾಗಿದ್ದಾರೆ.