ತುಮಕೂರು: ಜಾತ್ರಾ ಮಹೋತ್ಸವದಲ್ಲಿ ನೂಕು ನುಗ್ಗಲು ಉಂಟಾಗಿ 30 ಮಂದಿಗೆ ಗಾಯವಾಘಿರುವ ಘಟನೆ ತುಮಕೂರು ಜಿಲ್ಲೆ, ತುರುವೇಕೆರೆ ತಾಲ್ಲೂಕಿನ ಮಾವಿನಕೆರೆ ಗ್ರಾಮದಲ್ಲಿ ನಡೆದಿದೆ. 35 ವರ್ಷಗಳ ಬಳಿಕ ರಾಮಲಿಂಗೇಶ್ವರ ಮತ್ತು ಚೌಡೇಶ್ವರಿ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, 50 ಸಾವಿರಕ್ಕೂ ಹೆಚ್ಚು ಜನರು ಜಾತ್ರೆಯಲ್ಲಿ ಪಾಲ್ಗೊಂಡಿದ್ದರು.. ಆದ್ರೆ ಈ ದುರ್ಘಟನೆ ಬಳಿಕ ಗಾಯಾಳುಗಳು ತುರುವೇಕೆರೆ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ. ತುರುವೇಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.