ಕರ್ನಾಟಕ ವಿಧಾನಸಭಾ ಚುನಾವಣೆ(Karnataka Assembly Elections) ಯ ದೃಷ್ಟಿಯಿಂದ ಗೋವಾ ಸರ್ಕಾರವು ಮೇ 10 ರಂದು ವೇತನ ಸಹಿತ ರಜೆ ಘೋಷಿಸಿದೆ. ಇದು ಸರ್ಕಾರಿ ಮತ್ತು ಕೈಗಾರಿಕಾ ನೌಕರರು ಸೇರಿದಂತೆ ಎಲ್ಲಾ ಖಾಸಗಿ ಕಂಪನಿಗಳಿಗೂ ಅನ್ವಯವಾಗಲಿದೆ. ಈ ನಿರ್ಧಾರದಿಂದ ಗೋವಾದಲ್ಲಿರುವ ಕನ್ನಡಿಗರು ರಾಜ್ಯಕ್ಕೆ ತೆರಳಿ ಮತದಾನ ಮಾಡಲು ನೆರವಾಗಲಿದೆ. ಕರ್ನಾಟಕದಲ್ಲಿ ಮೇ 10 ರಂದು ವಿಧಾನಸಭಾ ಚುನಾವಣೆ ನಡೆಯಲಿದೆ.
ಈ ಕಾರಣದಿಂದಾಗಿ ಅಂದು ಗೋವಾ ಸರ್ಕಾರ ರಜೆ ಘೋಷಿಸಿದೆ. ಗೋವಾ ಸರ್ಕಾರದ ಈ ನಿರ್ಧಾರಕ್ಕೆ ಪ್ರತಿಪಕ್ಷಗಳು ಮೂರ್ಖ ನಿರ್ಧಾರ ಎಂದು ಕರೆದಿದ್ದಾರೆ. ಈ ರಜೆಯ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಬೇಕಾಗಬಹುದು ಎಂದು ಗೋವಾ ರಾಜ್ಯ ಕೈಗಾರಿಕೆಗಳ ಸಂಘ ಹೇಳಿದೆ. ವಾಸ್ತವವಾಗಿ, ಗೋವಾ ಸರ್ಕಾರವು ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯ ಕಾರಣ ಮೇ 10 ರಂದು ವೇತನ ಸಹಿತ ರಜೆಯನ್ನು ಘೋಷಿಸಿ ಸೋಮವಾರ ಅಧಿಸೂಚನೆಯನ್ನು ಹೊರಡಿಸಿತು.
ಮೇ 10 ರಂದು ಎಲ್ಲಾ ಸರ್ಕಾರಿ ಮತ್ತು ಕೈಗಾರಿಕಾ ನೌಕರರು ಸೇರಿದಂತೆ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವೇತನ ಸಹಿತ ರಜೆ ಘೋಷಿಸಲಾಗಿದೆ ಎಂದು ಈ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಇದೇ ವೇಳೆ ಗೋವಾ ಫಾರ್ವರ್ಡ್ ಪಾರ್ಟಿ ಟ್ವೀಟ್ ಮಾಡುವ ಮೂಲಕ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿದೆ.
ಗೋವಾ ರಾಜ್ಯ ಕೈಗಾರಿಕಾ ಸಂಘದ ಅಧ್ಯಕ್ಷ ದಾಮೋದರ್ ಕೋಚ್ಕರ್, ರಾಜ್ಯ ಸರ್ಕಾರದ ಈ ನಿರ್ಧಾರ ಮೂರ್ಖತನ ಎಂದು ಬಣ್ಣಿಸಿದ್ದಾರೆ. ಇದಲ್ಲದೆ, ಆಮ್ ಆದ್ಮಿ ಪಕ್ಷದ ಗೋವಾ ಘಟಕದ ಅಧ್ಯಕ್ಷ ಅಮಿತ್ ಪಾಲೇಕರ್ ರಾಜ್ಯ ಸರ್ಕಾರವನ್ನು ಟೀಕಿಸಿದರು ಮತ್ತು ಈ ನಿರ್ಧಾರವನ್ನು ಮೂರ್ಖ ನಿರ್ಧಾರ ಎಂದು ಹೇಳಿದ್ದಾರೆ. ಕರ್ನಾಟಕದಲ್ಲಿ ಮೇ 10 ರಂದು ಚುನಾವಣೆ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಹೊರಬೀಳಲಿದೆ.