PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಸ್ಕಾಟ್ಲ್ಯಾಂಡ್ ಪ್ರಧಾನ ಮಂತ್ರಿಯಾಗಿ ಪಾಕ್ ಮೂಲದ ಹಂಝಾ ಯೂಸುಫ್‌ ನೇಮಕ

March 29, 2023

ಕ್ಷಮೆ ಕೇಳದಿದ್ದರೆ ರಾಹುಲ್ ಗಾಂಧಿ ವಿರುದ್ಧ ಮತ್ತೊಂದು FIR ದಾಖಲಿಸುತ್ತೇನೆ: ರಂಜಿತ್ ಸಾವರ್ಕರ್

March 29, 2023

Code Of conduct: ಮಾಜಿ ಸಿಎಂ ಸಿದ್ದರಾಮಯ್ಯ ನೀತಿ ಸಂಹಿತೆ ಉಲ್ಲಂಘಿಸಿದ್ರಾ?! ಏನ್ ಹೇಳಿದ್ರು ಸಿದ್ದು!

March 29, 2023
Facebook Twitter Instagram
Thursday, March 30
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ರಾಜ್ಯ ಸರ್ಕಾರಿ ನೌಕರರ ಬೇಡಿಕೆ: ಮಾ.1ರಿಂದ ಅನಿರ್ಧಿಷ್ಟಾವಧಿ ಮುಷ್ಕರ – ಅಧ್ಯಕ್ಷ ನಿಂಗರಾಜು
ಜಿಲ್ಲೆ Prajatv KannadaBy Prajatv KannadaFebruary 24, 2023

ರಾಜ್ಯ ಸರ್ಕಾರಿ ನೌಕರರ ಬೇಡಿಕೆ: ಮಾ.1ರಿಂದ ಅನಿರ್ಧಿಷ್ಟಾವಧಿ ಮುಷ್ಕರ – ಅಧ್ಯಕ್ಷ ನಿಂಗರಾಜು

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಮಂಡ್ಯ :- ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳ ಈಡೇರಿಕೆಗಾಗಿ ಮಾರ್ಚ್ 1 ರಿಂದ ಮದ್ದೂರು ತಾಲೂಕಿನ ಸಮಸ್ತ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರವನ್ನು ಬೆಂಬಲಿಸುವುದೊಂದಿಗೆ ಯಶಸ್ವಿಗೊಳಿಸುವಂತೆ ಮದ್ದೂರು ತಾಲೂಕು ಸಂಘದ ಅಧ್ಯಕ್ಷರಾದ ನಿಂಗರಾಜು ಮನವಿ ಮಾಡಿದರು. ಮದ್ದೂರು ಪಟ್ಟಣದ ಸರ್ಕಾರಿ ನೌಕರರ ಸಂಘದ ಕಛೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು,

ದಿ. 21-02-2023 ರಂದು ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲೆ, ತಾಲ್ಲೂಕು, ಯೋಜನಾ ಶಾಖೆಗಳ ಚುನಾಯಿತ ಪ್ರತಿನಿಧಿಗಳ ಹಾಗೂ ವೃಂದ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳ ತುರ್ತು ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿಯ ಯೋಜನೆಯನ್ನು ಜಾರಿಗೊಳಿಸುವಂತೆ ಸರ್ಕಾರಕ್ಕೆ ಆಗ್ರಹಪಡಿಸಿ ರಾಜ್ಯದ ಸಮಸ್ತ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಬರುವ ಮಾರ್ಚ್ 1 ಬುಧವಾರದಿಂದ ಅನಿರ್ಧಿಷ್ಠಾವಧಿ ಮುಷ್ಕರಕ್ಕೆ ಕರೆ ನೀಡಲು 8,000 ಚುನಾಯಿತ ಪ್ರತಿನಿಧಿಗಳ ಸಮ್ಮುಖದಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಗಿದೆ ಎಂದರು.

2023-24 ನೇ ಸಾಲಿನ ಆಯ-ವ್ಯಯದಲ್ಲಿ ಸರ್ಕಾರಿ ನೌಕರರ ವೇತನ-ಭತ್ಯೆಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ಯಾವುದೇ ಪ್ರಸ್ತಾಪ ಮಾಡದಿರುವುದು ಸಹಜವಾಗಿಯೇ ನೌಕರರಲ್ಲಿ ನಿರಾಶೆ ಮೂಡಿಸಿದೆ ಎಂದರು. ರಾಜ್ಯ ಸರ್ಕಾರದ ಅಧಿಕಾರಿ-ನೌಕರರು ಹಾಗೂ ಸರ್ಕಾರದ ಅಧೀನಕ್ಕೊಳಪಡುವ ನೌಕರರು ಕಾಲಕಾಲಕ್ಕೆ ವೇತನ ಹಾಗೂ ಭತ್ಯೆಗಳನ್ನು ಪರಿಷ್ಕರಣೆಯೊಂದಿಗೆ ಪಡೆಯುವುದು ಅವರ ಮೂಲಭೂತ, ನ್ಯಾಯಸಮ್ಮತ ಹಕ್ಕಾಗಿದ್ದು, ಪ್ರಸ್ತುತ ದಿನಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನಲೆಯಲ್ಲಿ ನೌಕರರು ಕುಟುಂಬ ನಿರ್ವಹಣೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವುದರಿಂದ ನೌಕರರ ವೇತನ ಪರಿಷ್ಕರಣೆ ಮಾಡಿ ಅರ್ಥಿಕ ವ್ಯತ್ಯಾಸಗಳನ್ನು ಸರಿಪಡಿಸುವುದು,

ಸರ್ಕಾರದ ಜವಾಬ್ಬಾರಿಯಾಗಿದ್ದರೂ ನಿರ್ಲಕ್ಷ್ಯ ವಹಿಸಿರುವುದಕ್ಕೆ ಸಭೆಯು ಒಕ್ಕೊರಲಿನಿಂದ ಅಸಮ್ಮತಿ ವ್ಯಕ್ತಪಡಿಸಿ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರವನ್ನು ಒತ್ತಾಯಿಸಿ ಮಾರ್ಚ್ 1 ರಿಂದ ರಾಜ್ಯದ ಎಲ್ಲಾ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲು ನಿರ್ಣಯ ಕೈಗೊಂಡಿದೆ ಎಂದರು. ರಾಜ್ಯ ಸರ್ಕಾರಿ ನೌಕರರ ನ್ಯಾಯಯುತವಾದ ಬೇಡಿಕೆಯಾದ ವೇತನ ಪರಿಷ್ಕರಣೆಗೆ ಸಂಬಂಧಿಸಿದ ಮಧ್ಯಂತರ ವರದಿಯನ್ನು 7 ನೇ ವೇತನ ಆಯೋಗದಿಂದ ಶೀಘ್ರವಾಗಿ ಪಡೆದು, ದಿನಾಂಕ 01-07-2022 ರಿಂದ ಜಾರಿಗೆ ಬರುವಂತೆ ಶೇ.40% ರಷ್ಟು ವೇತನ ಹೆಚ್ಚಳ ಸೌಲಭ್ಯವನ್ನು‌ ಸರ್ಕಾರಿ ಆದೇಶ ಹೊರಡಿಸುವ ಮೂಲಕ ಅನುಷ್ಠಾನಗೊಳಿಸುವುದು ಪಂಜಾಬ್,

ರಾಜಸ್ಥಾನ, ಛತ್ತಿಸ್ ಘಡ, ಜಾರ್ಖಂಡ್, ಹಿಮಾಚಲಪ್ರದೇಶ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದ್ದು, ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಸಹ ಎನ್.ಪಿ.ಎಸ್ ಯೋಜನೆಯನ್ನು ರದ್ದುಪಡಿಸಿ ಹಳೇ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿದರು. ಸುದ್ದಿಗೋಷ್ಟಿಯಲ್ಲಿ ಉಪಾಧ್ಯಕ್ಷ ಉದಯ್ ಪ್ರಕಾಶ್, ತಮ್ಮೇಗೌಡ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್, ಖಜಾಂಚಿ ಉಮೇಶ್, ಸಹ ಕಾರ್ಯದರ್ಶಿಗಳಾದ ಚಂದ್ರಶೇಖರ್, ರಾಮಚಂದ್ರ, ಮಹೇಶ್, ಆಂತರಿಕ ಲೆಕ್ಕ ಪರಿಶೋಧಕ ಸತೀಶ್ ಕುಮಾರ್ ಹಾಗೂ ವಿವಿಧ ಇಲಾಖೆಗಳ ವೃಂದ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಜರಿದ್ದರು.

ವರದಿ : ಗಿರೀಶ್ ರಾಜ್ ಮಂಡ್ಯ

Share. Facebook Twitter WhatsApp Pinterest LinkedIn Tumblr Telegram Email

Related Posts

Code Of conduct: ಮಾಜಿ ಸಿಎಂ ಸಿದ್ದರಾಮಯ್ಯ ನೀತಿ ಸಂಹಿತೆ ಉಲ್ಲಂಘಿಸಿದ್ರಾ?! ಏನ್ ಹೇಳಿದ್ರು ಸಿದ್ದು!

March 29, 2023

ನನ್ನ ವಿರುದ್ಧ ಮಾಡಿರುವ ಭ್ರಷ್ಟಾಚಾರ ಆರೋಪ ಶುದ್ಧ ಸುಳ್ಳು: ಸಚಿವ ಬೈರತಿ‌ ಬಸವರಾಜ್

March 29, 2023

CM Ibrahim: 2023ರ ಚುನಾವಣೆಯಲ್ಲಿ HDK ಸಿಎಂ ಆಗದಿದ್ರೆ ನಾನು ರಾಜಕೀಯ ನಿವೃತ್ತಿ: ಸಿಎಂ ಇಬ್ರಾಹಿಂ

March 29, 2023

ಜನಾರ್ದನ ರೆಡ್ಡಿ ಪಕ್ಷಕ್ಕೆ ಅಧಿಕೃತ ಚಿಹ್ನೆ ದೊರೆತ ಬಳಿಕ ಮೊದಲ ಪ್ರವಾಸ ಕಾರ್ಯಕ್ರಮ

March 29, 2023

Death: ನೀರಿನ ಆಳ ಪರೀಕ್ಷೆಗಿಳಿದು ಮೂವರು ವಿದ್ಯಾರ್ಥಿಗಳು ನೀರುಪಾಲು

March 29, 2023

ಮತ್ತೆ ‘ಕೈ’ ಸೇರಲು ಮುಂದಾದ ಎ.ಬಿ.ಮಾಲಕರೆಡ್ಡಿ : ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿಗೆ ಮತ್ತೊಂದು ಹೊಡೆತ

March 29, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.