ಬಾಗಲಕೋಟೆ: ಇಂದಿನ ಪ್ರವಾಹ ಪರಿಸ್ಥಿತಿಗೆ ತುತ್ತಾಗಿರುವ ಜನರಿಗೆ ರಾಜ್ಯ ಸರ್ಕಾರ ಸಮಸ್ಯೆ ಆಲಿಸುವಲ್ಲಿ ವಿಫಲವಾಗಿದೆ ಎಂದು ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್ ಹೇಳಿದರು.
ಬಾಗಲಕೋಟೆ ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನೆರೆ ಸಂತ್ರಸ್ತರ ಸಮಸ್ಯೆ ಬಗ್ಗೆ ರಾಜ್ಯ ಸರ್ಕಾರ ಆಲಿಸುವಲ್ಲಿ ವಿಫಲವಾಗಿದೆ.
2019ರಲ್ಲಿ ಪ್ರವಾಹಬಂದಂತ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ತಕ್ಷಣವೇ ಪರಿಹಾರ ನೀಡಿದ್ದರು. ಇಂದಿನ ಪ್ರವಾಹ ಪರಿಸ್ಥಿತಿಗೆ ತುತ್ತಾಗಿರುವ ಜನರಿಗೆ ರಾಜ್ಯ ಸರ್ಕಾರ ಸಮಸ್ಯೆ ಆಲಿಸುವಲ್ಲಿ ವಿಫಲವಾಗಿದೆ ಎಂದರು.
ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ವಿರೋಧ ಪಕ್ಷ ಉಪ ನಾಯಕರಾದ ಅರವಿಂದ್ ಬೆಲ್ಲದ
ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರಾಜ್ಯ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಬಾಗಲಕೋಟೆ ಜಿಲ್ಲೆಯಲ್ಲಿ ಪ್ರವಾಹಕ್ಕೆ ತುತ್ತಾಗಿದ್ದ ಗ್ರಾಮಗಳಿಗೆ ಮತ್ತು ಜಮೀನುಗಳಿಗೆ ನೀರು ನುಗ್ಗೆ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿಯಾಗಿದೆ ಸೂಕ್ತ ಪರಿಹಾರ ನೀಡಬೇಕೆಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.
ರಾಜ್ಯಾದ್ಯಂತ 6 ತಂಡಗಳಾಗಿ ಪ್ರವಾಹ ಅಧ್ಯಯನ ಆರಂಭಿಸಿದ್ದೇವೆ
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಶಾಂತಗೌಡ ಪಾಟೀಲ. ಜಮಖಂಡಿ ಶಾಸಕ ಜಗದೀಶ ಗುಡಗುಂಟಿ, ತೇರದಾಳ ಶಾಸಕ ಸಿದ್ದು ಸವದಿ, ಅರುಣ ಕಾರಜೋಳ, ಮತ್ತು ಸ್ಥಳೀಯ ಮುಖಂಡರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.