ಬೆಂಗಳೂರು ;– ಸಸಿಹಿತ್ಲು ಬೀಚ್ ಅಭಿವೃದ್ಧಿಗೆ ಸರಕಾರ ಬದ್ಧವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ.
ಈ ಸಂಬಂಧ ವಿಧಾನಸಭೆಯಲ್ಲಿ ಮಾತನಾಡಿದ ಅವರು, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿನ ಪ್ರವಾಸಿ ತಾಣಗಳ ಅಭಿವೃದ್ಧಿಗಾಗಿ 245.84 ಕೋ. ರೂ.ಗಳ ಪ್ರಸ್ತಾವನೆ ಬಂದಿದ್ದು, ಅನುದಾನದ ಕೊರತೆ ಇರುವುದರಿಂದ ಎಲ್ಲ ಕಾಮಗಾರಿಗಳನ್ನೂ ಕೈಗೊಳ್ಳಲಾಗುತ್ತಿಲ್ಲ. ಸಸಿಹಿತ್ಲು ಬೀಚ್ ಅಭಿವೃದ್ಧಿಗೆ ಸರಕಾರ ಬದ್ಧವಾಗಿದೆ ಎಂದರು.
ಉಡುಪಿ ಜಿಲ್ಲೆಯಿಂದ ಪ್ರವಾಸೋದ್ಯಮ ಇಲಾಖಾ ಯೋಜನಾನುಷ್ಠಾನಕ್ಕೆ 61.15 ಕೋಟಿ ರೂ. ಪ್ರಸ್ತಾವನೆ ಬಂದಿದ್ದರೆ, ದ.ಕ. ಜಿಲ್ಲೆಯಿಂದ 63.51 ಕೋಟಿ ರೂ. ಹಾಗೂ ಉತ್ತರ ಕನ್ನಡ ಜಿಲ್ಲೆಯಿಂದ 121.18 ಕೋಟಿ ರೂ. ಪ್ರಸ್ತಾವನೆಗಳು ಸಲ್ಲಿಕೆಯಾಗಿವೆ. ಈ ಪೈಕಿ ತಲಾ 50 ಲಕ್ಷ ರೂ. ವೆಚ್ಚದ ಮರೋಳಿಯ ಶ್ರೀಸೂರ್ಯನಾರಾಯಣ ದೇವಸ್ಥಾನ ಹಾಗೂ ಅತ್ತಾವರದ ಶ್ರೀ ಮಂಗಳಾದೇವಿ ದೇವಸ್ಥಾನದ ಯಾತ್ರಿ ನಿವಾಸ ಕಾಮಗಾರಿಗಳಿಗೆ ಮಂಜೂರಾತಿ ದೊರೆತಿದೆ ಎಂದರು.