ಬೆಂಗಳೂರು ;- ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರು ಪೂರೈಕೆಗೆ ರಾಜ್ಯ ಸರಕಾರವು 6.41 ಕೋಟಿ ರೂ. ಹಣ ಬಿಡುಗಡೆ ಮಾಡಿದೆ ಎಂದು ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ.
ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರವು ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆಯಿಂದ 5.14 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಈ ಮೂಲಕ ಈ ಹಿಂದೆ ಒದಗಿಸಿದ್ದ 1 ಕೋಟಿ ರೂ. ಸೇರಿ ಸರ್ಕಾರ ಒಟ್ಟು 6.14 ಕೋಟಿ ರೂ. ನೀಡಿದಂತಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ರಾಜ್ಯದ ಹಲವೆಡೆ ಮುಂಗಾರಿನ ಅಭಾವ ಎದುರಾಗಿದ್ದು , ಹೀಗಾಗಿ ಗ್ರಾಮೀಣ ಭಾಗದ ಜನರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಬಾರದು ಎನ್ನುವ ಉದ್ದೇಶದಿಂದ ಸರ್ಕಾರ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿದೆ. ಕುಡಿಯುವ ನೀರಿನ ಅಭಾವ ಇರುವ 514 ಹಳ್ಳಿಗಳಿಗೆ 254 ಟ್ಯಾಂಕರ್ಗಳಲ್ಲಿ ನೀರು ಪೂರೈಕೆ ಮಾಡಲಾಗುವುದು ಎಂದರು.
![Demo](https://prajatvkannada.com/wp-content/uploads/2023/08/new-Aston-Band.jpeg)