ದರ್ಶನ್ ಎಂಡ್ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ವಿಚಾರಣೆ ಕೊನೆಯ ಹಂತ ತಲುಪಿದ್ದು ಪೊಲೀಸರು ಚಾರ್ಜ ಶೀಟ್ ಸಲ್ಲಿಸಿದ್ದಾರೆ. ಈ ವೇಳೆ ಸಾಕಷ್ಟು ಮಾಹಿತಿಯನ್ನು ಪೊಲೀಸರು ನೀಡಿದ್ದಾರೆ. ಅಲ್ಲದೆ ಆರೋಪಿಗಳ ಮೊಬೈಲ್ ನಲ್ಲಿದ್ದ ಮಾಹಿತಿಗಳು ಡಿಲೀಟ್ ಆಗಿದ್ದು ಅವುಗಳನ್ನು ರಿಟ್ರೀವ್ ಮಾಡಲಾಗಿದೆ.ಅವುಗಳಲ್ಲಿ ಕೆಲ ಫೋಟೋಗಳು ಲೀಕ್ ಆಗಿವೆ. ಈ ಸಂಬಂಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯಿಸಿದ್ದು, ರಿಟ್ರೀವ್ ಮಾಡಿರುವ ಫೋಟೋ ಬಿಟ್ಟಿರುವುದು ಅಕ್ಷಮ್ಯ ಅಪರಾಧ. ಪರಪ್ಪನ ಅಗ್ರಹಾರ ಜೈಲಿನ ದರ್ಶನ್ ಫೋಟೋ ಹೊರಬಿಟ್ಟಿದ್ದೇ ಸರ್ಕಾರ ಎಂದು ಆರೋಪಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಕರ್ನಾಟಕ ಕಂಡ ಅತ್ಯಂತ ಕ್ರೂರವಾದ ಹತ್ಯೆ. ಮುಡಾ, ವಾಲ್ಮೀಕಿ ನಿಗಮದ ಹಗರಣದ ಬಗ್ಗೆ ದೊಡ್ಡ ಚರ್ಚೆಯಾಯಿತು. ಮುಡಾ ವಿಚಾರ ಡೈವರ್ಟ್ ಮಾಡಲು ದರ್ಶನ್ ಕೇಸ್ ಮುನ್ನೆಲೆಗೆ ತಂದರು. ರಾಜ್ಯ ಸರ್ಕಾರ ಸಂಕುಚಿತ ಷಡ್ಯಂತ್ರ ನಡೆಸಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ರೇಣುಕಾಸ್ವಾಮಿಯನ್ನು ಕ್ರೂರವಾಗಿ ಹತ್ಯೆಗೈದ ಆರೋಪಿಗಳಿಗೆ ಶಿಕ್ಷೆಯಾಗಬೇಕು.ಇದರಲ್ಲಿ ಯಾವ ಅನುಮಾನ ಇಲ್ಲ. ರಿಟ್ರೀವ್ ಮಾಡಿರುವ ಫೋಟೋ ಬಿಟ್ಟಿರೋದು ಅಕ್ಷಮ್ಯ ಅಪರಾಧ. ಈ ವಿಚಾರವನ್ನು ನ್ಯಾಯಾಲಯ ಕೂಡ ಪರಿಗಣನೆಗೆ ತೆಗೆದುಕೊಳ್ಳುತ್ತೆ. ಫೋಟೋ ಹೊರಗಡೆ ಬಿಟ್ಟ ಅಧಿಕಾರಿಗಳ ವಿರುದ್ಧವೂ ಕ್ರಮ ಆಗಬೇಕು. ವಿಷಯ ಡೈವರ್ಟ್ ಮಾಡುವುದಕ್ಕೆ ರಾಜ್ಯ ಸರ್ಕಾರ ಈ ತರಹ ಮಾಡುತ್ತಿದೆ ಎಂದು ಆರೋಪಿಸಿದರು.