ಬೆಂಗಳೂರು: ಸಿಬಿಐ ರಾಜ್ಯ ಪ್ರವೇಶಕ್ಕೆ ರಾಜ್ಯ ಸರ್ಕಾರದಿಂದ ನಿರ್ಬಂಧ ಮಾಡಿರೋ ವಿಚಾರಕ್ಕೆ ಸರ್ಕಾರದ ನಡೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಟ್ವೀಟ್ನಲ್ಲಿ ಏನಿದೆ?
ಶ್ರೀಮಾನ್ ಸಿದ್ದರಾಮಯ್ಯನವರೇ ನಿಮ್ಮ ಸಿದ್ವಿಲಾಸಕ್ಕೆ ಉಘೇಉಘೇ ಎನ್ನಲೇಬೇಕು. ಅಂದು ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೇ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿರಿ. ಇಂದು ಮುಡಾ ಹಗರಣದಿಂದ ಬಚಾವಾಗಲು ನಿಮಗೀಗ ಅದೇ ಲೋಕಾಯುಕ್ತವೇ ಗತಿ ಎಂದರೇ ಇದೇ ಅಲ್ಲವೇ ಸಿದ್ದರಾಮಯ್ಯನವರೇ? ಎಂದು ಕಿಡಿಕಾರಿದ್ದಾರೆ.
ನಿಮ್ಮ ಗ್ರಹಚಾರಕ್ಕೆ ಎಸಿಬಿಯನ್ನೂ ಹೈಕೋರ್ಟ್ ಬರ್ಖಾಸ್ತು ಮಾಡಿಬಿಟ್ಟಿತು. ಈಗ ಲೋಕಾಯುಕ್ತವನ್ನೇ ಗುರಾಣಿ ಮಾಡಿಕೊಂಡು ಸಿಬಿಐ ರಾಜ್ಯ ಪ್ರವೇಶಕ್ಕೆ ಸಂಪುಟದಿಂದ ಬಾಗಿಲು ಬಂದ್ ಮಾಡಿಸಿದ್ದೀರಿ. ಅಲ್ಲಿಗೆ ಆರೋಪಿ ಅಪರಾಧಿಯಾದ ಎಂದೇ ಲೆಕ್ಕ. ಸಿದ್ದಾಪರಾದ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ. ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು. ನಿಮಗೂ ಭಯವಿದೆ. ಅದೇ ಈ ನೆಲದ ಕಾನೂನಿನ ಶಕ್ತಿ ಏನಂತೀರಿ? ಮುಡಾಸಿದ್ವಿಲಾಸ ಎಂದು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.