ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದ ಹನುಮ ಧ್ವಜ ವಿಚಾರವಾಗಿ ಬಿಜೆಪಿ ರಾಜಕೀಯ ಮಾಡುತ್ತಿದ್ದೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಸಿದ್ದರಾಮಯ್ಯ ಅವರ ಈ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿ ಕಾರಿದ್ದಾರೆ. ಸಿದ್ದರಾಮಯ್ಯ ಅವರ ಹೇಳಿಕೆ ವಿಚಾರವಾಗಿ ಮೂಡಿಗೆರೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆ ಧ್ವಜಸ್ಥಂಬ ನಿರ್ಮಿಸಿದ್ದೇ ರಾಮಧ್ವಜ ಹಾರಿಸಬೇಕೆಂದು. ಅವರ ಭಾವನೆ ವಿರುದ್ಧ ಸರ್ಕಾರ ನಡೆದುಕೊಳ್ಳುತ್ತಿದೆ. ಜನವರಿ 26ರಂದು ಅಲ್ಲಿ ರಾಷ್ಟ್ರಧ್ವಜ ಹಾರಿಸಿ, ಗೌರವ ಕೊಟ್ಡಿದ್ದಾರೆ. ರಾಷ್ಟ್ರಧ್ವಜಕ್ಕೆ ಅಗೌರ ತೋರಿರುವುದು ರಾಜ್ಯ ಸರ್ಕಾರ ಎಂದು ತಿರುಗೇಟು ನೀಡಿದ್ದಾರೆ.
ಸರ್ಕಾರಕ್ಕೆ ರಾಷ್ಟ್ರಧ್ವಜವನ್ನ ಹೇಗೆ ಹಾರಿಸಬೇಕು ಎಂಬುವುದು ಗೊತ್ತಿಲ್ಲ. ಧ್ವಜ ಯಾವ ಅಳತೆ ಇರಬೇಕು, ಯಾವುದನ್ನೂ ಲೆಕ್ಕಿಸದೆ ಸರ್ಕಾರ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದೆ. ಕಾಂಗ್ರೆಸ್ ಮೊದಲು ದೇಶ-ರಾಜ್ಯದ ಜನರ ಕ್ಷಮೆ ಕೇಳಬೇಕು. ಗ್ರಾಮ ಪಂಚಾಯಿತಿ ಸದಸ್ಯರ ತೀರ್ಮಾನದಂತೆ ಧ್ವಜ ಹಾರಿಸಲಾಗಿದೆ. ಕಾಂಗ್ರೆಸ್ ಮುಖಂಡರು, ಮುಖ್ಯಮಂತ್ರಿಗಳು ದ್ವಂದ್ವದಲ್ಲಿದ್ದಾರೆ. ಹೀಗಾಗಿ ಯಾವುದೇ ತೀರ್ಮಾನ ಮಾಡಲು ಸಾಧ್ಯವಾಗುತ್ತಿಲ್ಲ. ಪ್ರತಿಯೊಬ್ಬ ರಾಮ ಭಕ್ತನು ದುಷ್ಟ ರಾಜ್ಯ ಸರ್ಕಾರದ ನಡವಳಿಕೆಯನ್ನು ಗಮನಿಸುತ್ತಿದ್ದಾನೆ. ರಾಜ್ಯ-ದೇಶದಲ್ಲಿ ಹನುಮ ಧ್ವಜಕ್ಕೆ ಕಾಂಗ್ರೆಸ್ ವಿರೋಧಿಸುವುದು ನಾಚಿಕೆಗೇಡು ಎಂದರು.