ಬೆಂಗಳೂರಿಗರಿಗೆ ನೀರಿನ ಬರ ನೀಗಿಸಲು ಸರ್ಕಾರ ಮುಂದಾಗಿದೆ. ಇದರ್ ಮಧ್ಯ ಬೆಂಗಳೂರಿಗರಿಗೆ ನೀರಿದ ದರ ಏರಿಕೆ ಶಾಕ್ ಕೊಟ್ಟಿದೆ. ಹೌದು…ಕಾವೇರಿ ನೀರಿನ ದರ ಏರಿಕೆ ಮಾಡಲು ಸರ್ಕಾರ ಮುಂದಾಗಿದೆ. ಈ ಬಗ್ಗೆ ಸ್ವತಃ ಉಪಮುಖ್ಯಮಂತ್ರಿನಗರಾಭಿವೃದ್ಧಿ ಸಚಿವರೂ ಆದ ಡಿಕೆ ಶಿವಕುಮಾರ್ ಅವರೇ ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ.
ಡಿಕೆ ಶಿವಕುಮಾರ್ ಅವರು ಇಂದು ಮಂಡ್ಯ ಜಿಲ್ಲೆ, ಮಳವಳ್ಳಿ ತಾಲೂಕು, ಹಲಗೂರು ಸಮೀಪದ ತೊರೆಕಾಡನಹಳ್ಳಿಯಲ್ಲಿ ಕಾವೇರಿ 5ನೇ ಹಂತದಲ್ಲಿ ನಿರ್ಮಿಸಲಾದ ಜಲರೇಚಕ ಯಂತ್ರಾಗಾರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಕಾವೇರಿ ನೀರಿನ ದರವನ್ನು ಏರಿಕೆ ಮಾಡಲಾಗುತ್ತದೆ. ಯಾವಾಗಿನಿಂದ ನೀರಿನ ದರ ಏರಿಕೆ ಮಾಡುತ್ತೇವೆ ಎಂಬುದರ ಕುರಿತು ಶೀಘ್ರದಲ್ಲಿ ಹೇಳುತ್ತೆನೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಕಾವೇರಿನ ನೀರಿನ ದರ ಏರಿಕೆಯಾಗುವುದು ಪಕ್ಕಾ ಆದಂತಾಗಿದೆ.
ಇತ್ತೀಚೆಗೆ, ಬೆಂಗಳೂರು ನೀರು ಸರಬರಾಜು ಮಂಡಳಿಯು ನೀರಿನ ಶುಲ್ಕವನ್ನು ಹೆಚ್ಚಿಸುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿತ್ತು. ಅದರ ಬಗ್ಗೆ ಪ್ರತಿಕ್ರಿಯಿಸಿದ್ದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ನೀರಿನ ಶುಲ್ಕವನ್ನು ಹೆಚ್ಚಿಸುವುದು ಅನಿವಾರ್ಯವಾಗಿದೆ. ಸುಮಾರು 10 ವರ್ಷಗಳಿಂದ ನೀರಿನ ಶುಲ್ಕವನ್ನು ಹೆಚ್ಚಿಸಿಲ್ಲ. ಈಗ ನೀರಿನ ಸರಬರಾಜು ವೆಚ್ಛ, ಸರಬರಾಜು ವ್ಯವಸ್ಥೆಯ ನಿರ್ವಹಣಾ ವೆಚ್ಚ ಅಧಿಕವಾಗಿರುವುದಿರಂದ ನೀರಿನ ಶುಲ್ಕ ಏರಿಸುವುದು ಅನಿವಾರ್ಯವಾಗಿದೆ ಎಂದು ಹೇಳಿದ್ದರು