ಬೆಂಗಳೂರು: ಕೊರೊನಾ ವೈರಸ್ನ ಜೆಎನ್1 ರೂಪಾಂತರಿಯಿಂದಾಗಿ ಕೋವಿಡ್-19 ಸೋಂಕು ಹರಡುವಿಕೆ ತೀವ್ರಗೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಂಗಳವಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಕೋವಿಡ್ – 19 ರಾಜ್ಯ ತಾಂತ್ರಿಕ ಸಲಹಾ ಸಮಿತಿ 202ನೇ ಸಭೆಯ ಶಿಫಾರಸಿನ ಅನ್ವಯ ಈ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ
ಕೋವಿಡ್ ಮಾರ್ಗಸೂಚಿಯಲ್ಲಿ ಏನೇನಿದೆ?
- ಕೇರಳ, ತಮಿಳುನಾಡು ರಾಜ್ಯಗಳ ಗಡಿ ಭಾಗದಲ್ಲಿ ತಪಾಸಣೆ ಹೆಚ್ಚಳ
- ಕೊವಿಡ್ ನಿರ್ಬಂಧ ಅವಶ್ಯಕತೆ ಇಲ್ಲ
- ಗಡಿ ಜಿಲ್ಲೆಗಳಲ್ಲಿ ಅಗತ್ಯ ಸಂಖ್ಯೆಯ ಪರೀಕ್ಷೆಗಳನ್ನು ಹೆಚ್ಚಿಸಬೇಕು
- ಗಡಿ ಜಿಲ್ಲೆಗಳ ಕೋವಿಡ್ ಪರೀಕ್ಷಾ ವರದಿಯನ್ನು ಆರೋಗ್ಯ ಇಲಾಖೆಗೆ ಸಲ್ಲಿಸಲು ಜಿಲ್ಲಾಡಳಿತಗಳಿಗೆ ಸೂಚನೆ
- ತೀವ್ರ ಶ್ವಾಸಕೋಶ, ಉಸಿರಾಟದ ಸಮಸ್ಯೆ ಇರುವವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು
- ರೋಗ ಲಕ್ಷಣ ಇರುವವರನ್ನು ಕೊವಿಡ್ ಪರಿಶೀಲನೆಗೆ ಒಳಪಡಿಸಬೇಕು
- ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಕೊಠಡಿ ಸ್ಥಾಪನೆಗೆ ಸೂಚನೆ
- ಡಿ.3, 4ನೇ ವಾರದಲ್ಲಿ ಮಾಕ್ ಡ್ರಿಲ್ ಮುಕ್ತಾಯಗೊಳಿಸಲು ಸೂಚನೆ
- ಎಲ್ಲಾ ಹಿರಿಯ ನಾಗರೀಕರು (60 ವರ್ಷ ಹಾಗೂ ಮೇಲ್ಪಟ್ಟವರು), ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು (ವಿಶೇಷವಾಗಿ ಕಿಡ್ನಿ, ಹೃದಯ, ಲಿವರ್ ಸಮಸ್ಯೆಗಳು), ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು, ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ ಮಾಸ್ಕ್ ಧರಿಸಬೇಕು.
- ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ತೆರಳದಿರುವುದು ಸೂಕ್ತ.
- ಜ್ವರ, ಕೆಮ್ಮು, ನೆಗಡಿ, ಇತ್ಯಾದಿ ಉಸಿರಾಟದ ಸೋಂಕಿನ ಲಕ್ಷಣಗಳನ್ನು ಹೊಂದಿದವರು ತಕ್ಷಣವೇ ಅಗತ್ಯ ವೈದ್ಯಕೀಯ ಸಲಹೆಯನ್ನು ಪಡೆಯಬೇಕು.
- ಮೂಗು ಹಾಗೂ ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸುವುದು, ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ಭೇಟಿ ನೀಡದಿರುವುದು ಸೂಕ್ತವಾಗಿದೆ
- ಉತ್ತಮ ವೈಯಕ್ತಿಕ ಸ್ವಚ್ಛತೆ, ಆಗಾಗ್ಗೆ ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳೆದುಕೊಳ್ಳುವುದು, ಇತ್ಯಾದಿಗಳ ಪಾಲನೆಯು ಅಗತ್ಯವಾಗಿದೆ
- ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ, ಮನೆಯಲ್ಲಿರುವುದು ಸೂಕ್ತ. ಇತರ ವ್ಯಕ್ತಿಗಳೊಂದಿಗೆ, ವಿಶೇಷವಾಗಿ ಹಿರಿಯ ನಾಗರೀಕರು / ದುರ್ಬಲರನ್ನು (vulnerable) ಅವಶ್ಯವಿದ್ದಲ್ಲಿ, ಮಾತ್ರವೇ ಭೇಟಿ ಮಾಡುವುದು.
- ಆರೋಗ್ಯ ಸಮಸ್ಯೆಗಳನ್ನು ಹೊಂದಿದವರು, ಜನಸಂದಣಿಯ ಪ್ರದೇಶಗಳಿಗೆ ಭೇಟಿ ನೀಡಬೇಕಾದ ಸಂದರ್ಭದಲ್ಲಿ ಮಾಸ್ಕ್ ಧರಿಸುವಂತೆ ಸಲಹೆ
- ಅಂತರ ರಾಷ್ಟ್ರೀಯ ಪ್ರಯಾಣದ ಸಂದರ್ಭದಲ್ಲಿ ಎಚ್ಚರಿಕೆಯಿಂದಿದ್ದು, ವಿಮಾನ ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗೆ ಮಾಸ್ ಧರಿಸುವುದು ಹೆಚ್ಚಿನ ಗಾಳಿ-ಬೆಳಕು ಇಲ್ಲವ ಮತ್ತು ಜನದಟ್ಟಣೆ ಇರುವ ಸ್ಥಳಗಳಿಗೆ ತೆರಳದಿರುವುದೂ ಸೇರಿದಂತೆ ಇತರ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವುದು ಸೂಕ್ತವಾಗಿದೆ.