ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಮೊದಲ ದಿನವಾದ ಗುರುವಾರ 23,771 ವಿದ್ಯಾರ್ಥಿಗಳು ಗೈರಾಗಿದ್ದು, ಇಬ್ಬರು ಡಿಬಾರ್ ಆಗಿದ್ದಾರೆ ಎಂದು ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ. ಬೆಂಗಳೂರು ಸೇರಿ ರಾಜ್ಯಾದ್ಯಂತ ನಿನ್ನೆಯಿಂದ ಶುರುವಾದ ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 29ರವರೆಗೆ ನಡೆಯಲಿದೆ.
ಒಟ್ಟು 32 ಜಿಲ್ಲೆಗಳಿಂದ 5,33,797 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಪ್ರಥಮ ಭಾಷೆ ಪರೀಕ್ಷೆಗೆ ನಿನ್ನೆ ಒಟ್ಟು 5,10,026 ವಿದ್ಯಾರ್ಥಿಗಳು ಹಾಜರಾಗಿದ್ದರು. ಒಟ್ಟು 23,771 ವಿದ್ಯಾರ್ಥಿಗಳು ಗೈರಾಗಿದ್ದು, ಶೇಕಡಾ 95.55ರಷ್ಟು ಹಾಜರಾತಿ ಇತ್ತು ಎಂದು ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.