ಬೆಂಗಳೂರು : ಇಂದು ರಾಜ್ಯದ 31ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Chief Minister Siddaramaiah) ಅವರು 2 ನೇ ಬಾರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (D.K Shivakumar) ಅವರು ಮೊದಲ ಬಾರಿಗೆ ಉಪ ಮುಖ್ಯಮಂತ್ರಿಯಾಗಿ (Deputy Chief Minister) ಬೆಂಗಳೂರಿನ ಕಂಠೀರ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ರಾಜ್ಯಪಾಲ ಥಾವತ್ ಚಂದ್ ಗೆಹಲೋತ್ ಅವರು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞೆ ಬೋಧಿಸಲಿದ್ದಾರೆ. ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಲಿದ್ದು, ಪ್ರಮಾಣ ವಚನ ಸಮಾರಂಭಕ್ಕೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ಗಣ್ಯರು ಭಾಗಿಯಾಗಲಿದ್ದಾರೆ.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ನಟ ಮತ್ತು ಮಕ್ಕಳ್ ನೀಧಿ ಮಯ್ಯಂ ಮುಖ್ಯಸ್ಥ ಕಮಲ್ ಹಾಸನ್ ಭಾಗಿಯಾಗಿದ್ದಾರೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಪದಗ್ರಹಣಕ್ಕೆ ಕ್ಷಣಗಣನೆ ಶುರುವಾಗಿದ್ದು ಪದಗ್ರಹಣ ಸಮಾರಂಭದಲ್ಲಿ ಸಿನಿಮಾ ನಟ ನಟಿಯರು ಉಪಸ್ಥಿತರಿರಲಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್, ಗೀತಾ ಶಿವರಾಜ್ಕುಮಾರ್, ಕಮಲ್ ಹಾಸನ್, ರಮ್ಯಾ, ದುನಿಯಾ ವಿಜಯ್, ನಿಶ್ವಿಕಾ ನಾಯ್ಡು, ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.