ಬೆಂಗಳೂರು: ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರ ಗಲಾಟೆ ಶುರು ಮಾಡಿದ್ದು, ಗ್ಯಾರಂಟಿ ಬಗ್ಗೆ ಚರ್ಚೆ ಮಾಡಲು ಅವಕಾಶ ನೀಡುವಂತೆ ಬಿಜೆಪಿಯವರು ಪಟ್ಟು ಹಿಡಿದಿದ್ದಾರೆ.
ಇದಕ್ಕೆ ಪ್ರತಿಯಾಗಿ ‘ಈ ಮೊಂಡಾಟ ಬಿಡಿ, ಮೊಂಡಾಟದಿಂದ ಏನೂ ಆಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮತ್ತೆ ಇದೇ ಮೊಂಡಾಟ ಪದಕ್ಕೆ ಬಿಜೆಪಿ ಗದ್ದಲ ಮಾಡಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ‘ಮೊಂಡಾಟ ಅಸಂವಿಧಾನ ಪದವಾ?, ಯಾವುದೇ ಪ್ರಶ್ನೆಗೆ ಉತ್ತರ ನೀಡಲು ನಾವು ತಯಾರು. ವಿಪಕ್ಷಗಳ ಮಾತಿಗೆ ಹೆದರಿಕೊಂಡು ಓಡಿ ಹೋಗಲ್ಲ ಎಂದರು.