ಕರಿಬೇವು ಎಲೆಗಳನ್ನು ನೆನೆಸಿದ ನೀರು ಕುಡಿಯುವುದರಿಂದ ಆರೋಗ್ಯಕ್ಕೆ ಹಲವು ಉಪಯೋಗಗಳು ಇವೆ.
ಕರಿಬೇವಿನ ಎಲೆಗಳನ್ನು ದಕ್ಷಿಣ ಭಾರತದ ಪಾಕಪದ್ಧತಿಯಲ್ಲಿ ಎಥೇಚ್ಛವಾಗಿ ಬಳಸಲಾಗುತ್ತದೆ. ಅಡುಗೆಯ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ, ಕರಿಬೇವಿನ ಎಲೆಗಳು ಅನೇಕ ಆರೋಗ್ಯಕರ ಲಾಭಗಳನ್ನು ಒಳಗೊಂಡಿದೆ.
ಅನೇಕ ಆರೋಗ್ಯ ಸಮಸ್ಯೆಗಳ ವಿರುದ್ಧ ಕರಿಬೇವು ಉತ್ತಮವಾಗಿ ಕೆಲಸ ಮಾಡುತ್ತದೆ. ಕರಿಬೇವು ಎಲೆಗಳನ್ನು ನೆನೆಸಿದ ನೀರನ್ನು ನಿಯಮಿತವಾಗಿ ಸೇವನೆ ಮಾಡಿದರೆ ಅನೇಕ ಆರೋಗ್ಯ ಸಮಸ್ಯೆಗಳನ್ನು ಸುಧಾರಣೆ ಮಾಡಬಹುದು. ಅಲ್ಲದೆ, ದೇಹವು ಸದಾ ಆರೋಗ್ಯವಾಗಿರುತ್ತದೆ. ಕರಿಬೇವಿನ ಎಲೆಗಳನ್ನು ನೆನೆಸಿದ ನೀರನ್ನು ನಿಯಮಿತವಾಗಿ ಸೇವಿಸುವುದರಿಂದ ಆಗುವ ಪ್ರಯೋಜನಗಳನ್ನು ನೋಡೋಣ.
ಇಂದಿನ ಆಧುನಿಕ ಜಗತ್ತಿನಲ್ಲಿ ಕೊಲೆಸ್ಟ್ರಾಲ್ ಸಮಸ್ಯೆಯು ಅನೇಕರಲ್ಲಿ ಹೆಚ್ಚಾಗಿದೆ. ಕೊಲೆಸ್ಟ್ರಾಲ್ ಅನ್ನು ಅನೇಕ ಔಷಧಿಗಳಿಂದ ನಿಯಂತ್ರಿಸಲಾಗುವುದಿಲ್ಲ. ಈ ಸಂದರ್ಭದಲ್ಲಿ ನೀವು ಕರಿಬೇವಿನ ಎಲೆಗಳನ್ನು ಅವಲಂಬಿಸಬಹುದು. ಖಾಲಿ ಹೊಟ್ಟೆಯಲ್ಲಿ ಕರಿಬೇವಿನ ಸೊಪ್ಪನ್ನು ನೆನೆಸಿದ ನೀರನ್ನು ಕುಡಿಯುವುದರಿಂದ ಕೊಲೆಸ್ಟ್ರಾಲ್ ನಿಯಂತ್ರಣದಲ್ಲಿರುತ್ತದೆ.
ಕರಿಬೇವಿನ ಎಲೆಗಳಲ್ಲಿ ವಿಟಮಿನ್ ಎ ಹೇರಳವಾಗಿದೆ. ಕಣ್ಣುಗಳನ್ನು ಆರೋಗ್ಯವಾಗಿ ಇಡಲು ಈ ವಿಟಮಿನ್ ತುಂಬಾ ಉಪಯುಕ್ತವಾಗಿದೆ. ಕರಿಬೇವಿನ ಎಲೆಗಳನ್ನು ನೆನೆಸಿದ ನೀರನ್ನು ಕುಡಿಯುವುದರಿಂದ ಕಣ್ಣುಗಳು ಆರೋಗ್ಯವಾಗಿರುತ್ತವೆ. ದೃಷ್ಟಿ ಸುಧಾರಿಸುತ್ತದೆ. ವಿವಿಧ ಕಣ್ಣಿನ ಸಮಸ್ಯೆಗಳನ್ನು ತಡೆಯುತ್ತದೆ.
ಕರಿಬೇವಿನ ಎಲೆಗಳು ಕೂದಲಿಗೆ ತುಂಬಾ ಒಳ್ಳೆಯದು ಎಂದು ಎಲ್ಲರಿಗೂ ತಿಳಿದಿದೆ. ಕೂದಲು ಉದುರುವ ಸಮಸ್ಯೆಯನ್ನು ತಕ್ಷಣವೇ ಕಡಿಮೆ ಮಾಡುತ್ತದೆ. ಕರಿಬೇವಿನ ಎಲೆಗಳನ್ನು ಬಳಸುವುದರಿಂದ ಕೂದಲಿಗೆ ಪೋಷಣೆ ಸಿಗುತ್ತದೆ. ನೀರಿನಲ್ಲಿ ನೆನೆಸಿದ ಕರಿಬೇವಿನ ಎಲೆಗಳನ್ನು ನಿತ್ಯವೂ ಸೇವಿಸಿದರೆ, ಕೂದಲು ಉದುರುವ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಕೂದಲು ದಪ್ಪ ಮತ್ತು ಕಪ್ಪುಗಾಗಲು ಸಹಕಾರಿಯಾಗಿದೆ.