ಬೆಂಗಳೂರು: ರಾಜ್ಯದ ಹಲವೆಡೆ ಜೂನ್ 18ರಿಂದ 22ರವರೆಗೂ ತೀವ್ರ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವರುಣನ ಆಗಮನದಿಂದ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳು ತಂಪೇರಿದೆ. ಹಳೆ ಮೈಸೂರು ಭಾಗದಲ್ಲಿ ಮಳೆ ಹೆಚ್ಚಾಗಿದ್ದು, ಬೆಂಗಳೂರು, ಕೋಲಾರ, ರಾಮನಗರ, ಮಂಡ್ಯ ಮತ್ತು ತುಮಕೂರು ಜಿಲ್ಲೆಗಳಲ್ಲಿ ಜೂನ್ 18ರಿಂದ 22ರವರೆಗೂ ತೀವ್ರ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ.
ಮಂಗಳೂರು ಭಾಗದಲ್ಲಿ ಸುಮಾರು 150 ಮಿಲಿಮೀಟರ್ಗೂ ಅಧಿಕ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಹೆಚ್ಚು ಮಳೆಯಾಗುವ ಕಾರಣ ಜನರು ಮನೆಯಲ್ಲಿಯೇ ಸುರಕ್ಷಿತವಾಗಿರಿ. ಅಲ್ಲದೇ ಆದಷ್ಟು ಮಳೆಯ ಸಮಯದಲ್ಲಿ ಅಂಡರ್ ಪಾಸ್ಗಳಲ್ಲಿ ಸಂಚರಿಸಬೇಡಿ ಎಂದು ಹವಾಮಾನ ಇಲಾಖೆ ಜನರಿಗೆ ಸಲಹೆ ನೀಡಿದೆ