ಬೆಂಗಳೂರು ಗ್ರಾಮಾಂತರ: ಬ್ಯ್ರಾಂಡ್ ಬೆಂಗಳೂರಿಂದ ಬೀದಿ ಬದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸಲಾಗುತ್ತಿದೆ ಎಂದು ಅಖಿಲ ಕರ್ನಾಟಕ ರೈತರ ಮತ್ತು ವ್ಯಾಪಾರಿಗಳ ಒಕ್ಕೂಟ ಹಾಗೂ ಭಾರತೀಯ ಸೇವಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು..
ಕೆಆರ್ ಪುರದ ಸಂತೆ ಮೈದಾನದಿಂದ ಟಿನ್ ಫ್ಯಾಕ್ಟರಿ ವರೆಗೆ ಕಾಲ್ನಡಿಗೆ ಜಾಥ ನಡೆಸಿ ಬೀದಿ ಬದಿ ವ್ಯಾಪಾರಿಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.. ಬಳಿಕ ಮಾತನಾಡಿದ ಅಖಿಲ ಕರ್ನಾಟಕ ರೈತರ ಮತ್ತು ವ್ಯಾಪಾರಿಗಳ ಒಕ್ಕೂಟದ ಸಂಸ್ಥಾಪಕ ಅಧ್ಯಕ್ಷ ಎಲೆ ಶ್ರೀನಿವಾಸ್ ಅವರು, ಸರ್ಕಾರವು ಬ್ರ್ಯಾಂಡ್ ಬೆಂಗಳೂರು ಹೆಸರಲ್ಲಿ ಬೀದಿ ಬದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸುತ್ತಿದ್ದಾರೆ.
ವ್ಯಾಪಾರವನ್ನು ನಂಬಿಕೊಂಡು ಜೀವನ ಸಾಗಿಸುತ್ತಿರುವ ಬಡ ಕುಟುಂಬಗಳಿಗೆ ತೊಂದರೆಯಾಗುತ್ತಿದೆ. ಬ್ರ್ಯಾಂಡ್ ಬೆಂಗಳೂರಿಂದ ಮಾಲ್ ಗಳ ನಿರ್ಮಾಣ ಮಾಡುವ ಮೂಲಕ ಬಡವರನ್ನು ಸರ್ವನಾಶ ಮಾಡಲು ಸರ್ಕಾರ ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.. ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತಿದ್ದು, ಕೂಡಲೇ ಸರ್ಕಾರ ಬ್ರ್ಯಾಂಡ್ ಬೆಂಗಳೂರನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.. ಹಿಂಪಡೆಯದಿದ್ದಲ್ಲಿ ಆಗಸ್ಟ್ 14 ರಂದು ಕೆಪಿಸಿಸಿ ಕಚೇರಿಯ ಮುಂದೆ ಪ್ರತಿಭಟನೆ ಕೈಗೊಳ್ಳಲಾಗುವುದೆಂದು ಎಚ್ಚರಿಸಿದರು..
![Demo](https://prajatvkannada.com/wp-content/uploads/2023/08/new-Aston-Band.jpeg)