ನವದೆಹಲಿ: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪೋರ್ಟ್ಬ್ಲೇರ್ ಪ್ರದೇಶದಲ್ಲಿ ಇಂದು ಮುಂಜಾನೆ 5:07 ರ ಸುಮಾರಿಗೆ 5.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ಮಾಹಿತಿ ನೀಡಿದೆ.
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪೋರ್ಟ್ಬ್ಲೇರ್ ಪ್ರದೇಶದಲ್ಲಿ ಇಂದು ಮುಂಜಾನೆ 5:07 ರ ಸುಮಾರಿಗೆ ಬೂಮಿಯಿಂದ 10 ಕಿಮೀ ಆಳದಲ್ಲಿ 5.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು NCS ಟ್ವೀಟ್ ಮಾಡಿದೆ. ಭೂಕಂಪದಿಂದಾದ ಹಾನಿಯ ಬಗ್ಗೆ ಇನ್ನೂ ಯಾವುದೇ ವರದಿಯಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.