ದೊಡ್ಡಬಳ್ಳಾಪುರ: ತಾಲೂಕಿನ ಕಂಟನಕುಂಟೆಯ ಲಿಟ್ಲ್ ಮಾಸ್ಟರ್ ಶಾಲೆಯ ವಿಧ್ಯಾರ್ಥಿಗಳು ಪ್ರತಿಭಾ ಕಾರಂಜಿ,ಕ್ರೀಡಾಕೂಟ, ಯೋಗಾಸನ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಹಲವು ಬಹುಮಾನಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. 2024-25 ನೇ ಸಾಲಿನ ಹಾಡೋನಹಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ/ ಕಲೋತ್ಸವ ಕಾರ್ಯಕ್ರಮವು ಕಂಟನಕುಂಟೆಯ ಲಿಟಲ್ ಮಾಸ್ಟರ್ ಪಬ್ಲಿಕ್ ಶಾಲೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆಯಿತು.
25 ಶಾಲೆಗಳಿಂದ 250ಕ್ಕೂ ಹೆಚ್ಚು ಮಕ್ಕಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಲೋತ್ಸವಕ್ಕೆ ಮೆರುಗು ತಂದರು. ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯ 30ಕ್ಕೂ ಹೆಚ್ಚು ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ 25ಕ್ಕೂ ಹೆಚ್ಚು ಪ್ರಥಮ, ದ್ವಿತೀಯ ತೃತೀಯ ಸ್ಥಾನಗಳನ್ನು ಪಡೆದು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ
.ಗ್ರಾಮಾಂತರ ಜಿಲ್ಲೆ ಅಮೆಚೂರ್ ಯೋಗಾಸನ ಕ್ರೀಡಾ ಸಂಸ್ಥೆ, ಕರ್ನಾಟಕ ರಾಜ್ಯ ಅಮೆಚೂರ್ ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ಸಹಯೋಗದೊಂದಿಗೆ ದೊಡ್ಡಬಳ್ಳಾಪುರದ ನಿಸರ್ಗ ಯೋಗ ಕೇಂದ್ರ ಆಯೋಜಿಸಿದ್ದ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಲಿಟ್ಲ್ಮಾಸ್ಟರ್ ಪಬ್ಲಿಕ್ ಶಾಲೆಯ ಮಕ್ಕಳು ಅತಿ ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳನ್ನು ಪಡೆಯುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆಶಾಲೆಯ ಇಬ್ಬರು ವಿದ್ಯಾರ್ಥಿಗಳಾದ ಪ್ರಣವಿ ಮತ್ತು ತೇಜಸ್ವಿನಿ ಬಿ ಅವರು ಈ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಯೋಗ ಶಿಕ್ಷಕಿಯಾದ ರೂಪಾದೇವಿ.ಹೆಚ್.ಡಿ ಅವರಿಗೆ ಶಾಲೆಯ ವತಿಯಿಂದ ಅಭಿನಂದಿಸಲಾಯಿತು.
ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳ ಮಿಂಚು
2024 25 ನೇ ಸಾಲಿನ ತೂಬಗೆರೆ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯಿಂದ ಸುಮಾರು 170ಕ್ಕೂ ಹೆಚ್ಚು ಮಕ್ಕಳು ವಿವಿಧ ಆಟೋಟಗಳಲ್ಲಿ ಭಾಗವಹಿಸಿ 16 ಪ್ರಥಮ, 25ಕ್ಕೂ ಹೆಚ್ಚು ದ್ವಿತೀಯ ಹಾಗೂ 15ಕ್ಕೂ ಹೆಚ್ಚು ತೃತೀಯ ಬಹುಮಾನಗಳನ್ನು ಪಡೆಯುವ ಮೂಲಕ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅಲ್ಲದೇ ಈ ವರ್ಷವೂ ಸಹ ಶಾಲೆಯು ಹೋಬಳಿ ಮಟ್ಟದ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಬಹುಮಾನಿತ ವಿದ್ಯಾರ್ಥಿಗಳು ತಾಲೂಕು, ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಗೆಲುವನ್ನು ಸಾಧಿಸುವ ಮೂಲಕ ರಾಷ್ಟ್ರಕ್ಕೆ ಉತ್ತಮ ಕ್ರೀಡಾಪಟುಗಳಾಗಲಿ ಎಂದು ಶಾಲೆಯ ಕಾರ್ಯದರ್ಶಿ ಶ್ರೀನಿವಾಸ್ ಮೂರ್ತಿ ಅವರು ಶುಭ ಹಾರೈಸಿದರು. ವಿದ್ಯಾರ್ಥಿಗಳಿಗೆ ಸೂಕ್ತ ತರಬೇತಿ ನೀಡಿದ ದೈಹಿಕ ಶಿಕ್ಷಕ ವಿನೋದ್ ರಾಜ್ ಅವರಿಗೆ ಅಭಿನಂದನೆ ಸಲ್ಲಿಸಿದರು.
ಪ್ರತಿಭಾ ಕಾರಂಜಿ, ಯೋಗ ಹಾಗೂ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ವಿಜೇತರಾಗಿ ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳಿಗೆ ಶಾಲೆಯ ಕಾರ್ಯದರ್ಶಿ ಕೆ.ಜಿ.ಶ್ರೀನಿವಾಸ್ ಮೂರ್ತಿ, ಅಧ್ಯಕ್ಷೆ ಉಷಾ ಶ್ರೀನಿವಾಸ್ ಮೂರ್ತಿ, ಮುಖ್ಯೋಪಾಧ್ಯಾಯನಿ ಶೋಭಾವತಿ ಮತ್ತು ಸವಿತಾ ಹಾಗೂ ಎಲ್ಲಾ ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.