ಕನ್ನಡ ಬಿಗ್ ಬಾಸ್ ಸೀಸನ್ 11 ಆರಂಭವಾಗಿ ಎರಡು ವಾರವಷ್ಟೇ ಕಳೆದಿದೆ. ಆದರೆ ಆರಂಭದಿಂದಲೂ ಬಿಗ್ ಬಾಸ್ ಮನೆಯಲ್ಲಿ ಒಂದಲ್ಲ ಒಂದು ವಿವಾದಗಳು ನಡೆಯುತ್ತಲೆ ಇದೆ. ಪ್ರತಿಸಲ ತಪ್ಪು ನಡೆದಾಗ ಅದು ಸ್ಪರ್ಧಿಗಳಿಂದಲೇ ಆಗುತ್ತಿತ್ತು. ಆದರೆ ಈ ಭಾರಿ ಸ್ವತಃ ಬಿಗ್ ಬಾಸ್ ತಪ್ಪು ಮಾಡಿದಂತಿದೆ. ಅದೇ ಕಾರಣಕ್ಕೆ ಬಿಗ್ ಬಾಸ್ ನಿರ್ಧಾರವನ್ನೇ ಪ್ರಶ್ನಿಸಿದ್ದಾರೆ.
ಬಿಗ್ಬಾಸ್ ತೀರ್ಮಾನವನ್ನೇ ಕಿಚ್ಚ ಸುದೀಪ್ ಈ ಬಾರಿ ಪ್ರಶ್ನೆ ಮಾಡಿದ್ದಾರೆ. ವಾರಾಂತ್ಯದ ಪಂಚಾಯ್ತಿಯಲ್ಲಿ ಈ ಬಾರಿ ಬಿಗ್ಬಾಸ್ ನಿರ್ಧಾರದ ಬಗ್ಗೆ ಚರ್ಚೆ ಶುರುವಾಗಿದೆ. ಇಷ್ಟು ಮನೆಯವರು ಮಾಡುವ ತಪ್ಪುಗಳನ್ನು ಚರ್ಚೆ ಮಾಡುತ್ತಿರುವ ಈ ವೇದಿಕೆಯಲ್ಲಿ ಈ ಬಾರಿ ಕಂಪ್ಲೇಂಟ್ ಇರುವುದು ಬಿಗ್ಬಾಸ್ ಮೇಲೆ ಎನ್ನುತ್ತ ಮಾತು ಶುರು ಮಾಡಿರುವ ಸುದೀಪ್ ಅವರು, ಬಿಗ್ಬಾಸ್ ಅವಸರದ ನಿರ್ಧಾರ ತೆಗೆದುಕೊಂಡ್ರಾ ಅಥವಾ ತೆಗೆದುಕೊಂಡಿರುವ ನಿರ್ಧಾರ ತಪ್ಪಾಗಿತ್ತಾ ಎಂದು ಪ್ರಶ್ನೆ ಮಾಡಿದ್ದಾರೆ. ಸುದೀಪ್ ಅವರು ಯಾವ ನಿರ್ಧಾರದ ಬಗ್ಗೆ ಮಾತನಾಡುತ್ತಿದ್ದಾರೆ ಎನ್ನುವ ಬಗ್ಗೆ ಪ್ರೊಮೋ ಬಿಡುಗಡೆಯಾಗುತ್ತಿದ್ದಂತೆಯೇ ಸಾಕಷ್ಟು ಮಂದಿ ಚರ್ಚೆ ಮಾಡುತ್ತಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಬಿಗ್ಬಾಸ್ಗೆ ಸುದೀಪ್ ಅವರು ಗುಡ್ಬೈ ಹೇಳುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದ್ದರು. 10 ಸೀಸನ್ ಪೂರೈಸಿ 11ನೇ ಸೀಸನ್ ಶುರುವಾಗಿ ಕೆಲವೇ ದಿನಗಳಲ್ಲಿ ಸುದೀಪ್ ಅವರು ಈ ದಿಢೀರ್ ನಿರ್ಧಾರ ತೆಗೆದುಕೊಂಡಿದ್ದು ಏಕೆ ಎನ್ನುವ ಬಗ್ಗೆ ಪ್ರಶ್ನೆ ಶುರುವಾಗಿತ್ತು.
ಬಿಗ್ ಬಾಸ್ ಸೀಸನ್ 11 ಕ್ಕೆ ತೋರಿದ ಉತ್ತಮ ಪ್ರತಿಕ್ರಿಯೆಗಾಗಿ ಎಲ್ಲರಿಗೂ ಧನ್ಯವಾದಗಳು. ನೀವೆಲ್ಲರೂ ನನಗೆ ಮತ್ತು ಕಾರ್ಯಕ್ರಮಕ್ಕೆ ತೋರಿದ ಪ್ರೀತಿಯ ಬಗ್ಗೆ ಟಿವಿಆರ್ (ಸಂಖ್ಯೆ)ಯಲ್ಲಿ ಕಾಣುತ್ತಿದೆ. ಈ 10 ಪ್ಲಸ್ 1 ವರ್ಷ ನಿಮ್ಮೊಂದಿಗೆ ಪಯಣ ಮಾಡಿದ್ದು ಉತ್ತಮವಾಗಿತ್ತು. ನಾನು ಈಗ ಏನು ಬೇರೆ ಕಡೆಗೆ ನನ್ನ ನಡೆಯನ್ನು ಮುಂದುವರಿಸಲು ಇದು ಸಮಯವಾಗಿದೆ. ಇದು BBK ಗೆ ಹೋಸ್ಟ್ ಆಗಿ ನನ್ನ ಕೊನೆಯ ಸೀಸನ್ ಆಗಿರುತ್ತದೆ ಮತ್ತು ನನ್ನ ನಿರ್ಧಾರವನ್ನು ನನ್ನ ಕಲರ್ಸ್ ಮತ್ತು ಇಷ್ಟು ವರ್ಷಗಳಿಂದ ಬಿಗ್ಬಾಸ್ ಅನ್ನು ಅನುಸರಿಸಿದ ಎಲ್ಲರೂ ಗೌರವಿಸುತ್ತಾರೆ ಎಂದು ನಾನು ನಂಬುತ್ತೇನೆ. ಈ ಸೀಸನ್ ಅನ್ನು ಅತ್ಯುತ್ತಮವಾಗಿ ಮಾಡೋಣ, ಮತ್ತು ನಾನು ಕೂಡ ಅತ್ಯುತ್ತಮವಾಗಿ ನಿಮ್ಮೆಲ್ಲರನ್ನು ರಂಜಿಸುತ್ತೇನೆ. ಲವ್ ಮತ್ತು ಹಗ್ ಇದಕ್ಕಾಗಿ ಎಲ್ಲರಿಗೂ ಧನ್ಯವಾದಗಳು ಎಂದು ಟ್ವೀಟ್ ನಲ್ಲಿ ಸುದೀಪ್ ಬರೆದುಕೊಂಡು ಅಭಿಮಾನಿಗಳಿಗೆ ಶಾಕ್ ನೀಡಿದ್ದರು.