ಕಾಂಗ್ರೆಸ್ ಆಡಳಿತದಲ್ಲಿರುವ ಕರ್ನಾಟಕವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಜೆಪಿ ಗೆಲುವಿನೊಂದಿಗೆ ಅತಿಹೆಚ್ಚು ಲೀಡ್ ಗಳಿಸುವತ್ತ ನಿಗಾ ವಹಿಸಿದೆ. ಈ ಹಿನ್ನೆಲೆಯಲ್ಲಿ ಭಾನುವಾರ ಮೈಸೂರಿಗೆ ಆಗಮಿಸಿದ್ದ ಕೇಂದ್ರ ಗೃಹಸಚಿವ ಅಮಿತ್ ಶಾ ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಹೈವೋಲ್ಟೇಜ್ ಸಭೆ ನಡೆಸಿದ್ದಾರೆ. ಕರ್ನಾಟಕದಲ್ಲಿ ಹೆಚ್ಚಿನ ಲೀಡ್ನೊಂದಿಗೆ ಗೆಲುವು ಸಾಧಿಸುವತ್ತ ಗಮನ ಹರಿಸುವಂತೆ ಪಕ್ಷದ ವರಿಷ್ಠರಿಗೆ ಸೂಚನೆ ನೀಡಿದ್ದಾರೆ.
ಭಾನುವಾರ ಅಮಿತ್ ಶಾ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಹೈವೋಲ್ಟೇಜ್ ಕಣವಾಗಿರುವ ಮಂಡ್ಯವನ್ನು ಜೆಡಿಎಸ್ಗೆ ಬಿಟ್ಟುಕೊಡದಂತೆ ಕೆಲ ಬಿಜೆಪಿ ನಾಯಕರು ಪಟ್ಟು ಹಿಡಿದಿರುವ ಪ್ರಸಂಗವೂ ಕೇಳಿಬಂದಿದೆ. ಹಾಲಿ ಸಂಸದೆ ಸುಮಲತಾ ಅವರಿಗೆ ಟಿಕೆಟ್ ನೀಡುವುದು ಸೂಕ್ತ ಎಂಬ ಸಲಹೆಗಳೂ ಕೇಳಿಬಂದಿವೆ
ಸುಮಲತಾ ಅಂಬರೀಶ್ ಅವರಿಗೆ ಜಿಲ್ಲೆಯಲ್ಲಿ ಒಳ್ಳೆಯ ಹೆಸರು ಇದೆ. ಅವರಿಗೆ ಮೈತ್ರಿ (BJP-JDS Alliance) ಟಿಕೆಟ್ ನೀಡಿದ್ರೆ ಗೆಲುವು ಸುಲಭ. ಹಾಗಾಗಿ ಮಂಡ್ಯ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಡದಂತೆ ಪಟ್ಟು ಹಿಡಿದಿದ್ದಾರೆ. ಇದೆಲ್ಲವನ್ನು ಸಮಾಧಾನವಾಗಿಯೇ ಕೇಳಿಸಿಕೊಂಡ ಅಮಿತ್ ಶಾ ಅವರು ನೀವು ಕೂತಲ್ಲಿ ನಿಂತಲ್ಲಿ ನಿಮ್ಮ ಅಭಿಪ್ರಾಯ ಹೇಳಬೇಡಿ. ನಿಮ್ಮ ಮಾತಿನಿಂದ ಮೈತ್ರಿ ಧರ್ಮಕ್ಕೆ ಚೂರು ಧಕ್ಕೆಯಾದರೂ ನಾವು ಸಹಿಸಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ