ಟ್ರಾನ್ಸ್ ಫಾರ್ಮರ್ ಸ್ಫೋಟದಿಂದ ಇಬ್ಬರ ಸಾವು: 10 ಲಕ್ಷ ಪರಿಹಾರ ಘೋಷಣೆ ಮಾಡಿದ ಸಚಿವ ಸುನಿಲ್ ಕುಮಾರ್

ಬೆಂಗಳೂರು

ಬೆಂಗಳೂರು: ಬೆಂಗಳೂರಿನ ಮಂಗಮ್ಮನ ಪಾಳ್ಯ ಬಳಿ ಟ್ರಾನ್ಸ್ಫಾರ್ಮರ್​ ಸ್ಪೋಟಗೊಂಡು ತಂದೆ ಮಗಳು ಸಾವನ್ನಪ್ಪಿದ್ದರು. ಈ ಸಂಬಂಧ ವಿಧಾನಸಭೆಯಲ್ಲಿ ಇಂಧನ ಸಚಿವ ಸುನೀಲ್ ಕುಮಾರ್ ಪ್ರಸ್ತಾಪಿಸಿದ್ದು, ಇಬ್ಬರಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಟ್ರಾನ್ಸ್​ಫಾರ್ಮರ್​ ಸ್ಫೋಟಗೊಂಡು ತಂದೆ-ಮಗಳು ಸಾವನ್ನಪ್ಪಿದ್ದಾರೆ. ಇಬ್ಬರಿಗೂ ನಮ್ಮ ಬೆಸ್ಕಾಂ ಕಡೆಯಿಂದ ಪರಿಹಾರ ಘೋಷಣೆ ಮಾಡುತ್ತೇವೆ. ಪಾದಚಾರಿ ರಸ್ತೆಯಲ್ಲಿರುವ ಹಾಗೂ ಶಾಲಾ ಕಾಲೇಜು ಬಳಿ ಇರುವ ಟಿಸಿ ಬಗ್ಗೆ ವರದಿ ಕೇಳಿದ್ದೇನೆ ಎಂದು ಸುನೀಲ್ ಕುಮಾರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *