ವಾಷಿಂಗ್ಟನ್:- ಮುಂದಿನ ವರ್ಷ ಫೆಬ್ರುವರಿಯಲ್ಲಿ ಸುನೀತಾ ವಿಲಿಯಮ್ಸ್ ಭೂಮಿಗೆ ಮರಳಲಿದ್ದಾರೆ. ಸುನೀತಾ ವಿಲಿಯಮ್ಸ್ ಹಾಗೂ ಮತ್ತೊಬ್ಬ ಗಗನಯಾತ್ರಿ ಬುಚ್ ವಿಲ್ಮೋರ್ ತಾಂತ್ರಿಕ ದೋಷದಿಂದಾಗಿ ಬಾಹ್ಯಕಾಶದಲ್ಲೇ ಸಿಲುಕಿರುವ ವಿಚಾರ ಎಲ್ಲರಿಗೂ ತಿಳಿದೇ ಇದೆ.
ಇದೀಗ ಅವರು ವಾಪಾಸಾಗುವ ಬಗ್ಗೆ ಅಮೆರಿಕಸ ಬಾಹ್ಯಾಕಾಶ ಸಂಸ್ಥೆ ಮಹತ್ವದ ಸುದ್ದಿಯೊಂದನ್ನು ಹೊರಹಾಕಿದೆ. ಈ ಇಬ್ಬರು ಗಗನಯಾತ್ರಿಗಳು ಮುಂದಿನ ವರ್ಷ ಭೂಮಿಗೆ ಮರಳಲಿದ್ದಾರೆ ಎಂದು ನಾಸಾ ಹೇಳಿದೆ.
ಮುಂದಿನ ಫೆಬ್ರವರಿಯಲ್ಲಿ ಬುಚ್ ಮತ್ತು ಸುನಿತಾ ಕ್ರ್ಯೂ -9 ರೊಂದಿಗೆ ಹಿಂತಿರುಗುತ್ತಾರೆ ಮತ್ತು ಸ್ಟಾರ್ಲೈನರ್ ಸಿಬ್ಬಂದಿಯಿಲ್ಲದೆ ಹಿಂತಿರುಗುತ್ತಾರೆ ಎಂದು ನಾಸಾ ನಿರ್ವಾಹಕ ಬಿಲ್ ನೆಲ್ಸನ್ ಹೇಳಿದ್ದಾರೆ. ಬೋಯಿಂಗ್ ಬಾಹ್ಯಾಕಾಶ ನೌಕೆಯ ಥ್ರಸ್ಟರ್ ಅಸಮರ್ಪಕ ಕಾರ್ಯಗಳಿಂದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ಹಿಂತಿರುಗುವುದು ವಿಳಂಬವಾಗಿದೆ ಎಂದು ಅವರು ಹೇಳಿದರು.
ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಬೋಯಿಂಗ್ ಸಂಸ್ಥೆಯ ಸ್ಟಾರ್ಲೈನರ್ ಬಾಹ್ಯಾಕಾಶ ನೌಕೆಯ ಮೊದಲ ಮಾನವ ಸಹಿತ ಬಾಹ್ಯಾಕಾಶ ಯಾನವನ್ನು ಜೂನ್ 5ರಂದು ಆರಂಭಿಸಿದ್ದರು. ಜೂನ್ 6ರಂದು ಅಂತಾರಾಷ್ಟ್ರೀಯ ಬಾಹ್ಯಾಕಾಶ ಸ್ಟೇಷನ್ ತಲುಪಿದ್ದ ಅವರು ಒಂದು ವಾರ ಸಂಶೋಧನೆ ನಡೆಸಿ ವಾಪಸಾಗಬೇಕಿತ್ತು. ಆದರೆ, ತಾಂತ್ರಿಕ ಕಾರಣದಿಂದ ಅವರು ಅಲ್ಲಿಯೇ ಸಿಲುಕಿದ್ದಾರೆ. ಇವರು ಯಾವಾಗ ಬರುತ್ತಾರೆ ಎಂಬುದರ ಕುರಿತು ನಾಸಾ ಈಗ ಮಾಹಿತಿ ನೀಡಿದೆ.
ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿರುವ ಸುನೀತಾ ವಿಲಿಯಮ್ಸ್ ಅವರು 2025ರ ಫೆಬ್ರವರಿಯಲ್ಲಿ ವಾಪಸಾಗಲಿದ್ದಾರೆ. ಇವರು ಬೋಯಿಂಗ್ ಸ್ಟಾರ್ಲೈನರ್ ಬದಲು ಸ್ಪೇಸ್ಎಕ್ಸ್ನ ಕ್ರ್ಯೂ ಡ್ರ್ಯಾಗನ್ನಲ್ಲಿ ವಾಪಸಾಗಲಿದ್ದಾರೆ. ಸ್ಟಾರ್ಲೈನರ್ನಲ್ಲಿ ಹಲವು ತಾಂತ್ರಿಕ ದೋಷಗಳು ಉಂಟಾಗಿರುವ ಕಾರಣ ಕ್ರ್ಯೂ ಡ್ರ್ಯಾಗನ್ನಲ್ಲಿ ಕರೆದುಕೊಂಡು ಬರಲು ತೀರ್ಮಾನಿಸಲಾಗಿದೆ” ಎಂಬುದಾಗಿ ನಾಸಾ ತಿಳಿಸಿದೆ.
ಭಾರತದ ಮೂಲದ ಡಾ. ದೀಪಕ್ ಪಾಂಡ್ಯಾ ಮತ್ತು ಬೋನಿ ಪಾಂಡ್ಯ ಪುತ್ರಿಯಾಗಿರುವ 59 ವರ್ಷದ ಸುನೀತಾ, ಬಾಹ್ಯಾಕಾಶಕ್ಕೆ ಹೋದ ಮೊದಲ ಮಹಿಳಾ ಗಗನಯಾತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇವರು ಮೊದಲ ಬಾರಿಗೆ 2006ರಲ್ಲಿ ಯಶಸ್ವಿ ಗಗನಯಾತ್ರೆ ಕೈಗೊಂಡಿದ್ದರು. ಇದಾದ ಬಳಿಕ 2012ರಲ್ಲಿ ಮತ್ತೆ ಗಗನಯಾತ್ರೆ ಕೈಗೊಂಡಿದ್ದರು. ಅವರು ಬಾಹ್ಯಾಕಾಶದಲ್ಲಿ ಬರೋಬ್ಬರಿ 322 ದಿನಗಳನ್ನು ಕಳೆದಿದ್ದಾರೆ. ಸುನೀತಾ ವಿಲಿಯಮ್ಸ್ ಅತೀ ಹೆಚ್ಚು ಬಾರಿ ಬಾಹ್ಯಾಕಾಶಕ್ಕೆ ಹಾರಿದ ಹಾಗೂ ಬಾಹ್ಯಾಕಾಶದಲ್ಲಿ ಅಧ್ಯಯನ ನಡೆಸಿದ ಮಹಿಳಾ ಗಗನ ಯಾತ್ರಿ ಎಂದೂ ಗುರುತಿಸಲ್ಪಡುತ್ತಿದ್ದಾರೆ.
ಇದುವರೆಗೆ ಸುನೀತಾ ವಿಲಿಯಮ್ಸ್ ಗರಿಷ್ಠ ಬಾಹ್ಯಾಕಾಶ ಪ್ರಯಾಣ ಮಾಡಿದ್ದಾರೆ. ಮಹತ್ವದ ಅಧ್ಯಯನಕ್ಕಾಗಿ ಮಂಗಳವಾರವ ಮೂರನೇ ಬಾರಿ ಬಾಹ್ಯಾಕಾಶಕ್ಕೆ ಹಾರಲಿದ್ದ ಸುನೀತಾ ವಿಲಿಯಮ್ಸ್ ಎಲ್ಲ ತಯಾರಿ ಮಾಡಿಕೊಂಡಿದ್ದರು. ʼʼಕೊಂಚ ನರ್ವಸ್ ಆಗಿದ್ದೇನೆ. ಆದರೆ ಮತ್ತೆ ತವರಿಗೆ ಮರಳು ಅನುಭವವಾಗುತ್ತಿದೆ. ಬಾಹ್ಯಕಾಶವೇ ನನಗೆ ತವರಾಗಿದೆʼʼ ಎಂದು ಸುನೀತಾ ವಿಲಿಯಮ್ಸ್ ಹೇಳಿದ್ದರು.