ಅಹ್ಮದಾಬಾದ್ : ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟನ್ಸ್ ತನ್ನ 20 ಓವಚರ್ಗಳಲ್ಲಿ 9 ವಿಕೆಟ್ಗೆ 188 ರನ್ಗಳ ದೊಡ್ಡ ಮೊತ್ತವನ್ನೇ ಕಲೆಹಾಕಿತು. ಏಕಾಂಗಿ ಹೋರಾಟ ನಡೆಸಿದ ಯುವ ಓಪನರ್ ಶುಭಮನ್ ಗಿಲ್, 58 ಎಸೆತಗಳಲ್ಲಿ 101 ರನ್ ಸಿಡಿಸಿ ತಂಡದ ದೊಡ್ಡ ಮೊತ್ತಕ್ಕೆ ಕಾರಣರಾದರು. ಇದು ಅವರ ಐಪಿಎಲ್ ಕೆರಿಯರ್ನ ಮೊದಲ ಶತಕವಾಗಿದೆ. ಇದಕ್ಕೂ ಮುನ್ನ ಅಜೇಯ 94 ರನ್ ಅವರ ಬೆಸ್ಟ್ ಸ್ಕೋರ್ ಆಗಿತ್ತು. ಅವರಿಗೆ ಇನಿಂಗ್ಸ್ ಮಧ್ಯದಲ್ಲಿ ಸಾಯ್ ಸುದರ್ಶನ್ (47) ಉತ್ತಮ ಸಾಥ್ ಲಭ್ಯವಾಯಿತು. ಸನ್ರೈಸರ್ಸ್ ಹೈದರಾಬಾದ್ ಪರ ಅನುಭವಿ ವೇಗದ ಬೌಲರ್ ಭುವನೇಶ್ವರ್ ಕುಮಾರ್, 30ಕ್ಕೆ 5 ವಿಕೆಟ್ ಪಡೆದು ಮಿಂಚಿದರು.
ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಈವರೆಗೆ 61 ಪಂದ್ಯಗಳು ನಡೆದರೂ ಪ್ಲೇ-ಆಫ್ಸ್ಗೆ ಒಂದು ತಂಡವೂ ಅಧಿಕೃತವಾಗಿ ಕಾಲಿಟ್ಟಿಲ್ಲ. ಡಿಫೆಂಡಿಂಗ್ ಚಾಂಪಿಯನ್ಸ್ ಗುಜರಾತ್ ಟೈಟನ್ಸ್ 16 ಅಂಕಗಳೊಂದಿಗೆ ಅಂಕಪಟ್ಟಿಯ ಅಗ್ರಸ್ಥಾನದಲ್ಲಿ ಇದೆಯಾದರೂ, ಫ್ಲೇ-ಆಫ್ಸ್ ಟಿಕೆಟ್ ಸಿಕ್ಕಿಲ್ಲ. ಹೀಗಾಗಿ ಸನ್ರೈಸರ್ಸ್ ಹೈದರಾಬಾದ್ ಎದುರು ಮನೆಯಂಗಣದಲ್ಲಿ ಜಯ ದಕ್ಕಿಸಿಕೊಳ್ಳುವ ಲೆಕ್ಕಾಚಾರ ಮಾಡಿದೆ. ಇನ್ನು ಟಾಸ್ ಗೆದ್ದ್ ಸನ್ರೈಸರ್ಸ್ ಬೌಲಿಂಗ್ ಆಯ್ಕೆ ಮಾಡಿತು.
ಸೀಮಿತ ಓವರ್ಗಳ ಕ್ರಿಕೆಟ್ನಲ್ಲಿ ಶ್ರೀಲಂಕಾ ತಂಡದ ಕ್ಯಾಪ್ಟನ್ ಆಗಿರುವ ಆಲ್ರೌಂಡರ್ ದಸುನ್ ಶನಕ ಅವರಿಗೆ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ಪದಾರ್ಪಣೆ ಮಾಡುವ ಅವಕಾಶ ಸಿಕ್ಕಿದೆ. ಗುಜರಾತ್ ಟೈಟನ್ಸ್ ತಂಡದ ಆಡುವ 11ರ ಬಳಗದಲ್ಲಿ ಶನಕ ಸ್ಥಾನ ಪಡೆದುಕೊಂಡಿದ್ದಾರೆ. ಕೆಕೆಆರ್ ಎದುರು ಕೊನೇ ಓವರ್ನಲ್ಲಿ 5 ಸಿಕ್ಸರ್ ಹೊಡೆಸಿಕೊಂಡಿದ್ದ ಯಶ್ ದಯಾಳ್ ಕೂಡ ಟೈಟನ್ಸ್ ಪಡೆಯಲ್ಲಿ ಮರಳಿ ಸ್ಥಾನ ಪಡೆದಿದ್ದಾರೆ.
ಜಿ.ಟಿ XI:
ಶುಭಮನ್ ಗಿಲ್, ವೃದ್ಧಿಮಾನ್ ಸಹಾ (ವಿಕೆಟ್ಕೀಪರ್), ಸಾಯ್ ಸುದರ್ಶನ್, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ದಸುನ್ ಶನಕ, ರಾಹುಲ್ ತೆವಾಟಿಯ, ಮೋಹಿತ್ ಶರ್ಮಾ, ರಶೀದ್ ಖಾನ್, ಮೊಹಮ್ಮದ್ ಶಮಿ, ನೂರ್ ಅಹ್ಮದ್.
ಹಾರ್ದಿಕ್ ಪಾಂಡ್ಯ (ನಾಯಕ), ವೃದ್ಧಿಮಾನ್ ಸಹಾ (ವಿಕೆಟ್ಕೀಪರ್), ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯ, ಅಭಿನವ್ ಮನೋಹರ್, ಮೋಹಿತ್ ಶರ್ಮಾ, ರಶೀದ್ ಖಾನ್, ಮೊಹಮ್ಮದ್ ಶಮಿ, ಅಲ್ಜಾರಿ ಜೋಸೆಫ್, ನೂರ್ ಅಹ್ಮದ್, ಶುಭಮನ್ ಗಿಲ್, ಶ್ರೀಕರ್ ಭರತ್, ಶಿವಂ ಮಾವಿ, ಆರ್ ಸಾಯ್ ಕಿಶೋರ್, ಸಾಯ್ ಸುದರ್ಶನ್, ದಸುನ್ ಶನಕ, ಜಯಂತ್ ಯಾದವ್, ಪ್ರದೀಪ್ ಸಾಂಗ್ವಾನ್, ಮ್ಯಾಥ್ಯೂ ವೇಡ್, ಒಡೆಯನ್ ಸ್ಮಿತ್, ದರ್ಶನ್ ನಲ್ಕಂಡೆ, ಉರ್ವಿಲ್ ಪಟೇಲ್, ಯಶ್ ದಯಾಳ್.