ಯಾದಗಿರಿ : ಬೈಕ್ ಗೆ ಸಾರಿಗೆ ಬಸ್ ಡಿಕ್ಕಿಯಾಗಿ, ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಬಳಿ ಈ ದುರ್ಘಟನೆ ನಡೆದಿದೆ.
ಸುರಪುರದಿಂದ ತಿಂಥಣಿ ಕಡೆಗೆ ಹೊರಟ್ಟಿದ್ದ ಬೈಕ್ ಗೆ ಹಿಂಬದಿಯಿಂದ ಸಾರಿಗೆ ಬಸ್ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲಿ ಇಬ್ಬರು ಮಕ್ಕಳು ಸೇರಿ ಮೂವರು ಸಾವನ್ನಪ್ಪಿದ್ದರು. ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಇಬ್ಬರು ಸಾವನ್ನಪ್ಪಿದ್ದಾರೆ.
ಮೃತರೆಲ್ಲರು ಶಹಾಪುರದ ಹಳಿಸಗರ ಗ್ರಾಮದ ನಿವಾಸಿಗಳಾದ ಆಂಜನೇಯ (35) ಗಂಗಮ್ಮ (28) ಸಾವು ಆಂಜನೇಯ ಅವರ ಸಹೋದರನ ಮಕ್ಕಳಾದ ಪವಿತ್ರ (5) ಹಾಗೂ ರಾಯಪ್ಪ (3) ಮತ್ತು ಒಂದು ವರ್ಷದ ಮಗು ಹನುಮಂತು ಸಾವನ್ನಪ್ಪಿದ್ದಾರೆ.