ಆಸ್ಟ್ರೇಲಿಯಾ ವಿರುದ್ಧ ಇದೇ 23ರಂದು ನಡೆಯಲಿರುವ ಟಿ-20 ಸರಣಿಗೆ ಸೂರ್ಯಕುಮಾರ್ ಯಾದವ್ ಅವರನ್ನು ನಾಯಕರಾಗಿ ಆಯ್ಕೆ ಮಾಡಲಾಗಿದೆ.
ಇಂದು ಅಹಮದಾಬಾದ್ನಲ್ಲಿ ಸಭೆ ನಡೆಸಿದ ಆಯ್ಕೆ ಸಮಿತಿ ಭಾರತ ತಂಡಕ್ಕೆ ಹೊಸ ನಾಯಕನನ್ನು ಆಯ್ಕೆ ಮಾಡಿದೆ. ಕೆಲವು ಆಯ್ಕೆದಾರರು ಶ್ರೇಯಸ್ ಅಯ್ಯರ್ ಕಡೆಗೆ ಒಲವು ತೋರಿದ್ದರು. ಆದರೆ, ಅಂತಿಮ ಕ್ಷಣದಲ್ಲಿ ಅವರೂ ಸೂರ್ಯಕುಮಾರ್ರಿಗೆ ತಂಡದ ಜವಾಬ್ದಾರಿ ನೀಡಲು ನಿರ್ಧರಿಸಿದ್ದಾರೆ.
ಹಿರಿಯ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುರ್ಮಾಗೆ ವಿಶ್ರಾಂತಿ ನೀಡಲಾಗಿದೆ. ಹಾರ್ದಿಕ್ ಪಾಂಡ್ಯ ಗಾಯದಿಂದ ಇನ್ನೂ ಚೇತರಿಸಿಕೊಳ್ಳದ ಕಾರಣ ಸೂರ್ಯಕುಮಾರ್ ಯಾದವ್ಗೆ ನಾಯಕತ್ವದ ಜವಾಬ್ದಾರಿ ನೀಡಲಾಗಿದೆ.
ಇನ್ನೂ ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಟಿ-20 ಸರಣಿಗೆ ಬಿಸಿಸಿಐ 15 ಮಂದಿಯ ಭಾರತ ತಂಡವನ್ನು ಪ್ರಕಟಿಸಿದೆ. ಸೂರ್ಯಕುಮಾರ್ ಯಾದವ್ ನಾಯಕ ಹಾಗೂ ಋತುರಾಜ್ ಗಾಯಕ್ವಾಡ್ ಉಪನಾಯಕರಾಗಿದ್ದಾರೆ. ಶ್ರೇಯಸ್ ಅಯ್ಯರ್ ಅವರು ರಾಯ್ಪುರ ಮತ್ತು ಬೆಂಗಳೂರಿನಲ್ಲಿ ನಡೆಯಲಿರುವ ಕೊನೆಯ ಎರಡು ಟಿ-20 ಪಂದ್ಯಗಳಿಗೆ ಉಪ ನಾಯಕರಾಗಿ ತಂಡವನ್ನು ಸೇರಿಕೊಳ್ಳಲಿದ್ದಾರೆ.
ಭಾರತ ತಂಡ :
ಸೂರ್ಯಕುಮಾರ್ ಯಾದವ್ (ನಾಯಕ), ರುತುರಾಜ್ ಗಾಯಕ್ವಾಡ್ (ಉಪನಾಯಕ), ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್, ಮುಕೇಶ್ ಕುಮಾರ್