ಶ್ರೀಲಂಕಾ ವಿರುದ್ಧ ಮೂರನೇ ಟಿ20 ಪಂದ್ಯದಲ್ಲಿ ಸೂಪರ್ ಓವರ್ ಮೂಲಕ ಗೆಲುವು ಪಡೆಯುವ ಮೂಲಕ ಭಾರತ ತಂಡ, ಮೂರು ಪಂದ್ಯಗಳ ಟಿ20 ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿಕೊಂಡಿತು. ಟಿ20 ಸರಣಿಯ ಗೆಲುವಿನ ಬಳಿಕ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಸೂರ್ಯಕುಮಾರ್ ಯಾದವ್ ಅವರ ನಾಯಕತ್ವವನ್ನು ಕೊಂಡಾಡಿದರು.
ಭಾರತ ತಂಡದ ನಾಯಕನಾಗಿ ಸೂರ್ಯಕುಮಾರ್ ಯಾದವ್ ಹಾಗೂ ಹೆಡ್ ಕೋಚ್ ಗೌತಮ್ ಗಂಭೀರ್ ಅವರು ಮೊದಲ ಟಿ20 ಸರಣಿಯನ್ನು ಗೆದ್ದುಕೊಂಡಿದ್ದಾರೆ.
ಈ ಪಂದ್ಯದಲ್ಲಿ ಭಾರತ ನೀಡಿದ್ದ 138 ರನ್ಗಳ ಗುರಿಯನ್ನು ಹಿಂಬಾಲಿಸಿದ್ದ ಶ್ರೀಲಂಕಾ ತಂಡ, ಒಂದು ವಿಕೆಟ್ ನಷ್ಟಕ್ಕೆ 110 ರನ್ಗಳನ್ನು ಗಳಿಸಿತ್ತು. ಆ ಮೂಲಕ ಗೆಲುವಿನ ಸನಿಹ ಬಂದಿತ್ತು. ಆದರೆ, ಕೊನೆಯಲ್ಲಿ ಭಾರತ ತಂಡದ ಸ್ಪಿನ್ನರ್ಗಳ ಕಮಾಲ್ ಮಾಡಿದ್ದರು. ಪಾರ್ಟ್ ಟೈಮ್ ಸ್ಪಿನ್ನರ್ಗಳಾದ ರಿಂಕು ಸಿಂಗ್ 19ನೇ ಓವರ್ನಲ್ಲಿ ಎರಡು ವಿಕೆಟ್ ಕಿತ್ತಿದ್ದರೆ, 20ನೇ ಓವರ್ನಲ್ಲಿ ಸೂರ್ಯಕುಮಾರ್ ಯಾದವ್ 5 ರನ್ ನೀಡಿ ಎರಡು ವಿಕೆಟ್ ಕಿತ್ತಿದ್ದರು. ಆ ಮೂಲಕ ಪಂದ್ಯ ಟೈ ಆಗಿತ್ತು. ಸೂಪರ್ ಓವರ್ನಲ್ಲಿ ವಾಷಿಂಗ್ಟನ್ ಸುಂದರ್ ಭಾರತವನ್ನು ಗೆಲ್ಲಿಸಿದ್ದರು.