ಅಮೇರಿಕ ವಿರುದ್ಧದ ಪಂದ್ಯದಲ್ಲಿ ಸೂರ್ಯ ಕುಮಾರ್ ಯಾದವ್ ಅವರು ಅತ್ಯಂತ ಕೆಟ್ಟ ದಾಖಲೆ ಬರೆದಿದ್ದಾರೆ.
ನ್ಯೂಯಾರ್ಕ್ನ ನಸ್ಸೌ ಕ್ರೀಡಾಂಗಣದಲ್ಲಿ ನಡೆದ ಯುಎಸ್ಎ ವಿರುದ್ಧದ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಕಣ್ಕಕಿಳಿದ ಸೂರ್ಯ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ್ದರು
ನಿಧಾನಗತಿಯಲ್ಲಿ ರನ್ ಕಲೆಹಾಕಿದ ಸೂರ್ಯಕುಮಾರ್ ಯಾದವ್ 49 ಎಸೆತಗಳಲ್ಲಿ 2 ಭರ್ಜರಿ ಸಿಕ್ಸ್ ಹಾಗೂ 2 ಫೋರ್ಗಳೊಂದಿಗೆ ಅರ್ಧಶತಕ ಪೂರೈಸಿದ್ದರು. ಈ ಅರ್ಧಶತಕದೊಂದಿಗೆ ಟಿ20 ವಿಶ್ವಕಪ್ನಲ್ಲಿ ಅತ್ಯಂತ ನಿಧಾನವಾಗಿ ಹಾಫ್ ಸೆಂಚುರಿ ಸಿಡಿಸಿದ ಭಾರತೀಯ ಬ್ಯಾಟರ್ ಎಂಬ ಕಳಪೆ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಅಲ್ಲದೆ ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತ್ಯಂತ ನಿಧಾನವಾಗಿ ಅರ್ಧಶತಕ ಪೂರೈಸಿದ ವಿಶ್ವದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಕಳಪೆ ದಾಖಲೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಪಾಕಿಸ್ತಾನ್ ತಂಡದ ಆರಂಭಿಕ ಬ್ಯಾಟರ್ ಮುಹಮ್ಮದ್ ರಿಝ್ವಾನ್
ಟಿ20 ವಿಶ್ವಕಪ್ 2024ರ ಕೆನಡಾ ವಿರುದ್ಧದ ಪಂದ್ಯದಲ್ಲಿ ಪಾಕ್ ಬ್ಯಾಟರ್ ಮುಹಮ್ಮದ್ ರಿಝ್ವಾನ್ 52 ಎಸೆತಗಳಲ್ಲಿ ಅರ್ಧಶತಕ ಪೂರೈಸಿ ಈ ಕಳಪೆ ದಾಖಲೆ ಬರೆದಿದ್ದಾರೆ. ಹಾಗೆಯೇ ನೆದರ್ಲೆಂಡ್ಸ್ ವಿರುದ್ಧ 50 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಡೇವಿಡ್ ಮಿಲ್ಲರ್ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ.
ಇದೀಗ 49 ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸುವ ಮೂಲಕ ಟೀಮ್ ಇಂಡಿಯಾದ ಹೊಡಿಬಡಿ ದಾಂಡಿಗ ಸೂರ್ಯಕುಮಾರ್ ಯಾದವ್ ಈ ಕಳಪೆ ದಾಖಲೆ ಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸಿದ್ದಾರೆ.