ಬಾಲಿವುಡ್ ನಟಿ, ಮಾಜಿ ವಿಶ್ವಸುಂದರಿ ಸುಶ್ಮಿತಾ ಸೇನ್ ಗೆ ಹೃದಯಾಘಾತ ಆಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಎರಡು ಮೂರು ದಿನಗಳ ಹಿಂದೆಯೇ ಸುಶ್ಮಿತಾಗೆ ಹಾರ್ಟ್ ಅಟ್ಯಾಕ್ ಆಗಿದ್ದು, ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಈ ವಿಷಯವನ್ನು ಸ್ವತಃ ಸುಶ್ಮಿತಾ ಅವರೇ ಸೋಷಿಯಲ್ ಮೀಡಿಯಾ ಮೂಲಕ ತಿಳಿಸಿದ್ದಾರೆ.
ಈ ಬಗ್ಗೆ ಇನ್ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡಿರುವ ಸುಶ್ಮೀತಾ ಸೇನ್ ‘ನಿಮ್ಮ ಹೃದಯವನ್ನ ಸದಾ ಸಂತೋಷದಿಂದ ಹಾಗೂ ದೈರ್ಯದಿಂದ ಇಟ್ಟುಕೊಳ್ಳಿ. ನಿಮಗೆ ಅಗತ್ಯವಿರುವಾಗ ಅದು ನಿಮ್ಮೊಂದಿಗೆ ನಿಲ್ಲುತ್ತದೆ ಇದು ನನ್ನ ತಂದೆಯ ಬುದ್ಧಿವಂತ ಮಾತುಗಳು. ಒಂದೆರಡು ದಿನಗಳ ಹಿಂದೆಯಷ್ಟೇ ನನಗೆ ಹೃದಯಾಘಾತ ಸಂಭವಿಸಿತು. ನನಗೆ ಆಂಜಿಯೋಪ್ಲಾಸ್ಟಿ ಮಾಡಲಾಗಿದೆ. ಸ್ಟೆಂಟ್ ಅಳವಡಿಸಲಾಗಿದೆ. ಮುಖ್ಯವಾಗಿ, ನನ್ನ ಹೃದ್ರೋಗ ತಜ್ಞ ‘’ನನಗೆ ದೊಡ್ಡ ಹೃದಯವಿದೆ’’ ಎಂದು ದೃಢಪಡಿಸಿದ್ದಾರೆ. ನನ್ನ ಆರೋಗ್ಯ ಸ್ಥಿತಿ ಉತ್ತಮವಾಗಿದೆ. ಮತ್ತೆ ಜೀವನ ಸಾಗಿಸಲು ನಾನು ಸಿದ್ಧಳಾಗಿದ್ದೇನೆ. ನನ್ನ ಪ್ರೀತಿ ಪಾತ್ರರಿಗೆ ಈ ಗುಡ್ ನ್ಯೂಸ್ ತಿಳಿಸುವ ಸಲುವಾಗಿ ಈ ಪೋಸ್ಟ್ ಹಂಚಿಕೊಳ್ಳುತ್ತಿದ್ದೇನೆ. ನಿಮ್ಮೆಲ್ಲರನ್ನು ನಾನು ಪ್ರೀತಿಸುತ್ತೇನೆ’’ ಎಂದು ಇನ್ಸ್ಟಾಗ್ರಾಮ್ನಲ್ಲಿ ನಟಿ ಸುಶ್ಮಿತಾ ಸೇನ್ ಬರೆದುಕೊಂಡಿದ್ದಾರೆ.