ಬಿಜೆಪಿಯಿಂದ ಶಾಸಕರ ಸಹಿತ 12 ಮುಖಂಡರ ಅಮಾನತು

ರಾಷ್ಟ್ರೀಯ

ಗುಜರಾತ್ ವಿಧಾನಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಮತ್ತೆ ಅಧಿಕಾರ ಗಳಿಸಲು ಆಡಳಿತರೂಢ ಬಿಜೆಪಿ ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಘಟಾನುಘಟಿ ನಾಯಕರುಗಳು ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದಾರೆ. ಇದರ ಮಧ್ಯೆ ಬಂಡಾಯ ಅಭ್ಯರ್ಥಿಗಳ ತಲೆನೋವು ಪಕ್ಷದ ನಾಯಕರನ್ನು ಕಾಡುತ್ತಿದ್ದು,

ಪಕ್ಷೇತರರಾಗಿ ಕಣಕ್ಕಿಳಿದಿರುವ 12 ಮಂದಿಯನ್ನು ಈಗ ಸಸ್ಪೆಂಡ್ ಮಾಡಲಾಗಿದೆ. ಇವರುಗಳ ಪೈಕಿ 6 ಬಾರಿ ಆಯ್ಕೆಯಾಗಿರುವ ಶಾಸಕರುಗಳು ಸಹ ಇದ್ದಾರೆ. ಈ ಮೊದಲು ಮೊದಲ ಹಂತದ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಪಕ್ಷೇತರರಾಗಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ ಏಳು ಮಂದಿ ಬಂಡಾಯ ಬಿಜೆಪಿ ಮುಖಂಡರನ್ನು ಅಮಾನತುಗೊಳಿಸಲಾಗಿತ್ತು. ಇದೀಗ ಎರಡನೇ ಹಂತದ ಚುನಾವಣೆಗಾಗಿ ನಾಮಪತ್ರ ಸಲ್ಲಿಸಿರುವ 12 ಮಂದಿಯನ್ನು ಸಸ್ಪೆಂಡ್ ಮಾಡಲಾಗಿದೆ.