ಬೆಂಗಳೂರು: ನಗರದ ಪ್ರಸಿದ್ಧ ಕೆಫೆಯಲ್ಲಿ ಅನುಮಾನಾಸ್ಪದ ಸ್ಪೋಟವಾಗಿದ್ದು, ಐವರಿಗೆ ಗಾಯಗಳಾಗಿರುವ ಘಟನೆ ಇಂದಿರಾನಗರದ ಹೊಟೆಲ್ ರಾಮೇಶ್ವರಂ ಕೆಫೆಯಲ್ಲಿ ನಡೆದಿದ್ದು ವ್ಯಕ್ತಿಯೋರ್ವ ತಂದಿದ್ದ ಬ್ಯಾಗ್ ನಲ್ಲಿ ಸ್ಪೋಟ ವಾಗಿರುವ ಮಾಹಿತಿ ಒದಗಿದ್ದು ಸ್ಥಳಕ್ಕೆ ಪೊಲೀಸರ ಭೇಟಿ ಪರಿಶೀಲನೆ ನಡೆಸಲಾಗುತ್ತಿದೆ.
ನಿಗೂಢ ಸ್ಫೋಟದ ವೇಳೆ ಭಾರಿ ಪ್ರಮಾಣದ ಶಬ್ಧವಾಗಿದೆ. ಇದರಿಂದ ಜನರು ಒಂದು ಕ್ಷಣ ಭಯಭೀತರಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅಗ್ನಿ ಶಾಮಕ ದಳ ಆಗಮಿಸಿದ್ದು ಬೆಂಕಿ ನಂದಿಸಿದ್ದಾರೆ. ಆದ್ರೆ, ಸ್ಫೋಟಕ್ಕೆ ಕಾರಣ ಏನು ಎನ್ನುವುದು ಮಾತ್ರ ಇನ್ನೂ ತಿಳಿದುಬಂದಿದಲ್ಲ.
ಸಿಲಿಂಡರ್ ಅಥವಾ ಬಾಯ್ಲರ್ ಸ್ಫೋಟ ಕೂಡ ಆಗಿರಬಹುದೆಂದು ಎಂದು ಶಂಕಿಸಲಾಗಿದೆ ವಿನಃ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಇನ್ನು ಸ್ಥಳಕ್ಕೆ ಎಚ್ಎಎಲ್ ಪೊಲೀಸ್ ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.