ಶ್ರೀಲಂಕಾ ತಂಡದ ಯುವ ವಿಕೆಟ್ಕೀಪರ್ ಬ್ಯಾಟ್ಸ್ಮನ್ ಕುಶಲ್ ಮೆಂಡಿಸ್ ಮಿಂಚಿನ ಶತಕ ಬಾರಿಸುವ ಮೂಲಕ ದಿಗ್ಗಜ ಕುಮಾರ ಸಂಗಕ್ಕಾರ ದಾಖಲೆ ಮುರಿದಿದ್ದಾರೆ. ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮಂಗಳವಾರ (ಅ.10) ನಡೆದ ಪಂದ್ಯದಲ್ಲಿ ಬದ್ಧ ಎದುರಾಳಿ ಪಾಕಿಸ್ತಾನ ಎದುರು ಸ್ಪೋಟಕ ಬ್ಯಾಟಿಂಗ್ ನಡೆಸಿದ ಕುಶಲ್ ಮೆಂಡಿಸ್, ಕೇವಲ 65 ಎಸೆತಗಳಲ್ಲಿ ಶತಕ ಬಾರಿಸಿದರು. ಈ ಮೂಲಕ ಏಕದಿನ ಕ್ರಿಕೆಟ್ ವಿಶ್ವಕಪ್ ಇತಿಹಾಸದಲ್ಲಿ ಶ್ರೀಲಂಕಾ ಪರ ಅತಿವೇಗದ ಶತಕ ಬಾರಿಸಿದ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಐಸಿಸಿ ಒಡಿಐ ವಿಶ್ವಕಪ್ 2023 ಟೂರ್ನಿಯಲ್ಲಿ ಶ್ರೀಲಂಕಾ ತಂಡ ತನ್ನ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಎದುರು 102 ರನ್ಗಳ ಹೀನಾಯ ಸೋಲುಂಡಿತ್ತು. ಹೀಗಾಗಿ ಪಾಕಿಸ್ತಾನ ಎದುರು ಭರ್ಜರಿ ಕಮ್ಬ್ಯಾಕ್ ಎದುರು ನೋಡುತ್ತಿದೆ. ಇದಕ್ಕೆ ತಕ್ಕ ಆಟವಾಡಿದ ಕುಶಲ್ ಮೆಂಡಿಸ್ ಸ್ಪೋಟಕ ಬ್ಯಾಟಿಂಗ್ ಮೂಲಕ ತಂಡದ ಬೃಹತ್ ಮೊತ್ತಕ್ಕೆ ಭದ್ರ ಅಡಿಪಾಯ ಹಾಕಿಕೊಟ್ಟರು.